ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲರಿಗೆ ಬೆಂಗಳೂರಿನಲ್ಲಿ ಅತ್ಯುತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿಯೊಂದಿಗೆ ಸಮ್ಮಾನ
ಬೆಳಗಾವಿ, ಜ, 25 : ಭಾರತ ಚುನಾವಣಾ ಆಯೋಗದ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆ ಪ್ರಯುಕ್ತ ಕೊಡಮಾಡುವ ಅತ್ಯುತ್ತಮ "ಜಿಲ್ಲಾ ಚುನಾವಣಾಧಿಕಾರಿ" ಪ್ರಶಸ್ತಿಯನ್ನು ಬೆಳಗಾವಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಬುಧವಾರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಂದ ಬೆಂಗಳೂರಿನಲ್ಲಿ ಸ್ವೀಕರಿಸಿದರು.