ಕೊನೆಗೂ ನಿಗದಿಯಾಯ್ತು ಬೆಳಗಾವಿ ಪಾಲಿಕೆ ಮಹಾಪೌರ ಮತ್ತು ಉಪಮಹಾಪೌರ ಚುನಾವಣೆ
ಬೆಳಗಾವಿ, ಜ, 13 : ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಹಾಗೂ ಉಪ ಮಹಾಪೌರ ಆಯ್ಕೆಗೆ ಬರುವ ಫೆಬ್ರವರಿ ೬ರಂದು ಚುನಾವಣೆ ನಿಗದಿಪಡಿಸಲಾಗಿದೆ.
ಕಳೆದ ಒಂದು ವರ್ಷದಿಂದ ಬೆಳಗಾವಿ ಮಹಾನಗರ ಪಾಲಿಕೆಯ ಮಹಾಪೌರ ಮತ್ತು ಉಪಮಹಾಪೌರ ಸ್ಥಾನಕ್ಕೆ ಚುನಾವಣೆ ನಡೆಯದೆ ಮುಂದೆ ಸಾಗುತ್ತ ನಡೆದಿತ್ತು. ಇದರಿಂದ ಕೆಲವು ಪಾಲಿಕೆ ಸದಸ್ಯರು ಕೂಡಾ ಸಾರ್ವಜನಿಕವಾಗಿ ಬೇಸರ್ ವ್ಯಕ್ತಪಡಿಸಿದ್ದರು. ಆದರೆ ಇಂದು ಕೊನೆಯಲ್ಲಿ ಬೆಳಗಾವಿ ಪಾಲಿಕೆ ಮಹಾಪೌರ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮತ್ತು ಉಪಮಹಾಪೌರ ಸ್ಥಾನಕ್ಕೆ ಹಿಂದುಳಿದ ವರ್ಗ ಬ ಮಹಿಳೆಗೆ ಮೀಸಲಾತಿ ಪ್ರಕಟಿಸಲಾಗಿದೆ. ಆದರೆ ಈಗ ಪಾಲಿಕೆ ಮಹಾಪೌರ ಆಯ್ಕೆಗೆ ಚುನಾವಣೆ ನಿಗದಿ ಆಗಿದೆ. ಸದಸ್ಯರು ನಿಟ್ಟುಸಿರು ಬಿಟ್ಟಿದ್ದಾರೆ.
ಫೆ.6ರ ಬೆಳಗ್ಗೆ 10 ಗಂಟೆಗೆ ಮಹಾಪೌರ ಮತ್ತು ಉಪಮಹಾಪೌರ ಸ್ಥಾನಕ್ಕೆ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಬಹುದು, ಮಧ್ಯಾಹ್ನ 1 ಗಂಟೆಗೆ ನಾಮಪತ್ರಗಳ ಪರಿಶೀಲನೆ ಹಾಗೂ ಮಧ್ಯಾಹ್ನ 3 ಗಂಟೆಗೆ ನೂತನ ಮಹಾಪೌರ ಮತ್ತು ಉಪಮಹಾಪೌರ ಘೋಷಣೆ ಮಾಡಲಾಗುವದು ಎಂದು ಪ್ರಾದೇಶಿಕ ಆಯುಕ್ತ ಎಂ.ಜಿ.ಹಿರೇಮಠ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.