ಬೆಳಗಾವಿ

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಬೆಳಗಾವಿಯ ಪ್ರಣೀತ್ ಪಾಟೀಲ ಆಯ್ಕೆ

ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಬೆಳಗಾವಿಯ ಪ್ರಣೀತ್ ಪಾಟೀಲ ಆಯ್ಕೆ

ಬೆಳಗಾವಿ 16 :  ಇಲ್ಲಿನ ಶಿವಬಸವ ನಗರದ ಜಿ. ಜಿ. ಯಳ್ಳೂರ ಪ್ರಾಥಮಿಕ ಶಾಲೆಯ 7ನೇ ತರಗತಿ ವಿದ್ಯಾರ್ಥಿ ಪ್ರಣೀತ ಕೃಷ್ಣಕಾಂತ ಪಾಟೀಲ, 14 ವರ್ಷ ವಯೋಮಾನದ  ಜಿಲ್ಲಾ ಮಟ್ಟದ ಕ್ರೀಡಾಕೂಟದ  ಸ್ಪರ್ಧೆಯಲ್ಲಿ ಅಮೋಘ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬೆಳಗಾವಿ ತಾಲ್ಲೂಕಿನ ಚಂದೂರು ಗ್ರಾಮದ ನಿವಾಸಿಯಾಗಿರುವ ಪ್ರಣೀತ ಜಿಲ್ಲಾ ಮಟ್ಟದಲ್ಲಿ ನಡೆದ 400 ಮೀಟರ್ ಓಟದಲ್ಲಿ ಹಾಗೂ 600 ಮೀಟರ್ ಓಟದ ಸ್ಪರ್ಧಿಗಳೆರಡರಲ್ಲೂ ಪ್ರಥಮ ಸ್ಥಾನಗಳಿಸಿ  ರಾಜ್ಯ ಮಟ್ಟದ ಕ್ರೀಡೆಗೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗೆ ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ಸನ್ಮಾನಿಸಿ ಆಶೀರ್ವದಿಸಿದ್ದು, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಜೆ. ಬಿ. ಪಟೇಲ್, ಶಾಲೆಯ ಮುಖ್ಯೋಪಾಧ್ಯಾಯ ಎಮ್‌. ಎನ್‌. ಮಠಪತಿ, ದೈಹಿಕ ಶಿಕ್ಷಕ ಲಕ್ಷ್ಮಣ ರೋಣಿ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ವಿದ್ಯಾರ್ಥಿಯ ಸಾಧನೆಗೆ ಅಭಿನಂದನೆ ಸಲ್ಲಿಸಿದ್ದಾರೆ. 


ಸುದ್ದಿ ಓದಿ