ಜಮಖಂಡಿ

ಸಾಮಾಜಿಕ ನ್ಯಾಯಕ್ಕಾಗಿ ಬೆಳಗಾವಿ ಚಲೋ

ಸಾಮಾಜಿಕ ನ್ಯಾಯಕ್ಕಾಗಿ ಬೆಳಗಾವಿ ಚಲೋ

ಜಮಖಂಡಿ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌.ಡಿ.ಪಿ.ಐ) ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ ನಗರದ ಅಂಬೇಡ್ಕರ್ ವೃತ್ತದಲ್ಲಿ ರಾಜ್ಯ ನಾಯಕರ ಜೊತೆ ನೂರಾರು ಕಾರ್ಯಕರ್ತರು ಜಾಥಾ ಮತ್ತು ಸಾರ್ವಜನಿಕರ ಸಭೆ ನಡೆಸಿದರು. 

ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ಅವರು ಮಾಧ್ಯಮದರೊಂದಿಗೆ ಮಾತನಾಡಿದ ಅವರು, ಚುನಾವಣೆಗೂ ಮುಂಚೆ ಸಿದ್ದರಾಮಯ್ಯನರವರು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮೊದಲ ಅಧಿವೇಶನದಲ್ಲೇ 2ಬಿ ಮೀಸಲಾತಿಯನ್ನು ಜಾರಿ ಮಾಡುತ್ತೇವೆ, ಕಾಂತರಾಜ್ ಆಯೋಗದ ವರದಿಯನ್ನು ಸಾರ್ವಜನಿಕಗೊಳಿಸುತ್ತೇವೆ ಎಂದು ಆಶ್ವಾಸನೆ ನೀಡಿ ಅಧಿಕಾರಕ್ಕೆ ಬಂದರು. ಅಧಿಕಾರಕ್ಕೆ ಬಂದ ನಂತರ ಸಿದ್ದರಾಮಯ್ಯ ಸರ್ಕಾರ ಜನರನ್ನು ವಂಚಿಸುತ್ತಿದೆ ಎಂದು ಆರೋಪಿಸಿದರು. 

ಅಫ್ಸರ್ ಕೊಡ್ಲಿಪೇಟೆ ಮಾತನಾಡಿ, ಸಾಮಾಜಿಕ ನ್ಯಾಯದ ನೆಲೆಗಟ್ಟಿನಲ್ಲಿ, ನಾಡಿನ ಸಮಸ್ತ ಪ್ರಜೆಗಳಿಗೂ ಸಮಾನ ಅವಕಾಶ, ಹಕ್ಕು, ಅಧಿಕಾರ ಮತ್ತು ಆಸ್ತಿ ಹಂಚೆಕೆಯಾಗಬೇಕು ಎನ್ನುವುದು ಸಂವಿಧಾನದ ಆಶಯವಾಗಿರುತ್ತದೆ. ಎಲ್ಲರಿಗೂ ಸಮಾನ ಹಕ್ಕು, ಅಧಿಕಾರ ಮತ್ತು ಅವಕಾಶಗಳು ಸಿಗಬೇಕೆನ್ನುವ ಉದ್ದೇಶವನ್ನು ನಾವು ಹೊಂದಿದ್ದೇವೆ ಎಂದು ಎಲ್ಲ ಪಕ್ಷಗಳೂ ಹೇಳಿಕೊಳ್ಳುತ್ತವೆ. ಆದರೆ ಅವರ ಪಕ್ಷದ ಸರ್ಕಾರ ಅಧಿಕಾರಕ್ಕೆ ಬಂದಾಗ ಶೋಷಿತ, ಅವಕಾಶವಂಚಿತ ಸಮುದಾಯಗಳಿಗೆ ದ್ರೋಹವೆಸಗುತ್ತಲೇ ಬಂದಿವೆ. ಕೂಡಲೇ ಒಳ ಮೀಸಲಾತಿ ಕುರಿತು ಸರಕಾರ ತೀರ್ಮಾನ ಕೈಗೊಳ್ಳಬೇಕು ಮತ್ತು ಸದಾಶಿವ ಆಯೋಗದ ವರದಿಯನ್ನು ಒಕ್ಕೂಟ ಸರಕಾರಕ್ಕೆ ಶಿಫಾರಸ್ಸು ಮಾಡಬೇಕು” ಎಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು. 

ಇದೇ ಸಂದರ್ಭದಲ್ಲಿ ಕರ್ನಾಟಕದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ರಾಜ್ಯ ಸಮಿತಿ ಸದಸ್ಯರಾದ ಮಜೀದಖಾನ್ ಮೈಸೂರು, ಯಮನಪ್ಪ ಗುಣದಾಳ, ರಿಯಾಜ್ ಕಡಂಬು, ರಮಜಾನ್ ಕಡಿವಾಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಖಾದಿರ್, ಉಮರ್ ಫಾರುಕ್ ಖಾಲೆಕಾನ್, ಮುಬಾರಖ್ ಅಲ್ಲಾಖಾನ್ ತಾಲೂಕಾ ಅಧ್ಯಕ್ಷ ಯಾಸೀನ ಬಾಗವಾನ್ ಪ್ರಧಾನ ಕಾರ್ಯದರ್ಶಿ ಖಾಜಾಅಮಿನ್ ಕಂಕರಪೀರ್, ರಾಜು ತಾಳಿಕೋಟಿ ಸೇರಿದಂತೆ ಕಾರ್ಯಕರ್ತರು ಇದ್ದರು. 


ಸುದ್ದಿ ಓದಿ