ಬೆಳಗಾವಿಯಲ್ಲಿ ಎರಡು ಗುಂಪುಗಳಲ್ಲಿ ಗಲಾಟೆ ಪ್ರಕರಣ ; 10 ಜನರ ಬಂಧನ
ಬೆಳಗಾವಿ : ಗುರುವಾರ ದಿನ ಶಹಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಎರಡು ಪ್ರಕರಣ ದಾಖಲಾಗಿದ್ದು, ಈ ವರೆಗೆ ಒಟ್ಟು 10 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ರಿಕೆಟ್ ಆಟದ ಸಂದರ್ಭದಲ್ಲಿ ಯುವಕರ ನಡುವೆ ಜಗಳವಾಗಿ ಗಲಾಟೆ ಪ್ರಾರಂಭವಾಯಿತು. ನಂತರ ಅವರ ಪೋಷಕರು ಭಾಗಿಯಾಗಿದ್ದರು.
ಸುದ್ದಿ ತಿಳಿದು ಸ್ಥಳಕ್ಕೆ ಶಹಾಪುರ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿ ಪರಿಸ್ಥಿತಿಯನ್ನು ಸಹಜ ಸ್ಥಿತಿಗೆ ತಂದರು.
ಈ ಸಂಬಂಧ ಒಟ್ಟು 2 ಎಫ್ ಐಆರ್ ದಾಖಲಾಗಿದ್ದು, 10 ಮಂದಿಯನ್ನು ಬಂಧಿಸಲಾಗಿದೆ. ಲಭ್ಯವಿರುವ ಸಿಸಿಟಿವಿ ದೃಶ್ಯಾವಳಿಗಳನ್ನು ಮತ್ತಷ್ಟು ಪರಿಶೀಲಿಸುತ್ತಿದ್ದೇವೆ ಮತ್ತು ಇತರರನ್ನು ಗುರುತಿಸಲಾಗುತ್ತಿದೆ. ನಗರದಲ್ಲಿ ಪರಿಸ್ಥಿತಿ ಸಹಜವಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.