ಬಳ್ಳಾರಿ: ಮಾರ್ಚ್ 21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: 31154 ವಿದ್ಯಾರ್ಥಿಗಳು ಸಜ್ಜು
ಬಳ್ಳಾರಿ 19: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಇದೇ ಮಾ.21ರಿಂದ ಪ್ರಾರಂಭವಾಗಿ ಏ.4ರವರೆಗೆ ನಡೆಯಲಿದ್ದು, ಇದಕ್ಕೆ 16058 ಬಾಲಕರು ಹಾಗೂ 15096 ಬಾಲಕೀಯರು ಸೇರಿದಂತೆ ಒಟ್ಟಾರೆ 31154ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ವಿದ್ಯಾಥರ್ಿಗಳು ಸುಸೂತ್ರವಾಗಿ ಪರೀಕ್ಷೆ ಬರೆಯುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ಮೂಲಕ ಪರೀಕ್ಷೆ ಮುಖ್ಯ ಅಧೀಕ್ಷಕರು, ತಹಸೀಲ್ದಾರರು, ಬಿಇಒ, ಉಪಖಜನಾಧಿಕಾರಿಗಳೊಂದಿಗೆ ನಡೆಸಿದ ವೀಡಿಯೋ ಸಂವಾದದಲ್ಲಿ ಈ ಸೂಚನೆ ನೀಡಿದರು. ಪರೀಕ್ಷೆಗೆ ಸಂಬಂಧಿಸಿದಂತೆ ಜಿಲ್ಲಾಮಟ್ಟದ ವೀಕ್ಷಕರನ್ನು ನೇಮಿಸಲಾಗುತ್ತದೆ. ನೇಮಕವಾದ ವೀಕ್ಷಕರು ಸರಿಯಾಗಿ ಕಾರ್ಯ ಪ್ರವೃತರಾಗಬೇಕು. ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಂತದಲ್ಲಿ ಸಂಚಾರಿ ಜಾಗೃತ ದಳವನ್ನು ಹಾಗೂ ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳವನ್ನು ನೇಮಕ ಮಾಡಲಾಗಿದೆ. ಜಾಗೃತದಲ್ಲಿ ನೇಮಕವಾದವರು ಪರೀಕ್ಷಾ ಕೇಂದ್ರಗಳಿಗೆ ಆಕಸ್ಮಿಕ ಭೇಟಿ ನೀಡಿ ಪರೀಕ್ಷೆಯಲ್ಲಿ ಅಕ್ರಮವಾಗದಂತೆ ಎಚ್ಚರವಹಿಸಬೇಕು ಎಂದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯು ಇದೇ ಮಾಚರ್್ 21 ರಿಂದ ಏ.04 ರವರೆಗೆ ನಡೆಯಲಿದೆ. ಜಿಲ್ಲೆಯಲ್ಲಿ ಬಳ್ಳಾರಿ ಪೂರ್ವ -14, ಹಗರಿಬೊಮ್ಮನಹಳ್ಳಿ -09, ಹೊಸಪೇಟೆ-17, ಹಡಗಲಿ-10, ಕೂಡ್ಲಿಗಿ-15, ಸಂಡೂರು-07, ಸಿರುಗುಪ್ಪ-11 ಮತ್ತು ಕುರುಗೋಡು-22 ಒಟ್ಟು 99 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ನಡೆಯಲಿವೆ. ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಆವರಣವನ್ನು ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಪರೀಕ್ಷೆ ವೇಳೆ 200 ಮೀಟರ್ರೊಳಗಿನ ಜಿರಾಕ್ಸ್ ಸೆಂಟರ್ಗಳನ್ನು ಮುಚ್ಚುವಂತೆ ಸೂಚಿಸಲಾಗಿದೆ ಎಂದರು. ಮೊಬೈಲ್ ಫೋನ್, ಬ್ಲೂಟೂತ್, ಡಿವೈಸ್, ಪೇಜರ್, ವೈರ್ಲೆಸ್, ಕ್ಯಾಲ್ಕುಲೇಟರ್ ಇತರೆ ಮೊದಲಾದ ಎಲೆಕ್ಟ್ರಾನಿಕ್ ಉಪಕರಣಗಳನ್ನು ಕೇಂದ್ರದಲ್ಲಿ ಪರೀಕ್ಷಿಸಿ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಕೊರತೆ ಇದ್ದಲ್ಲಿ ಅಗತ್ಯ ಸಿದ್ದತೆ ಮಾಡಿ ಎಂದರು. ಜಿಪಂ ಸಿಇಒ ಕೆ.ನಿತೀಶ್ ಅವರು ಕೂಡ ಕೆಲ ಸಲಹೆಗಳನ್ನು ಈ ಸಂದರ್ಭದಲ್ಲಿ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶ್ರೀಧರ್, ಖಜನಾಧಿಕಾರಿ ರವಿ, ತಹಸೀಲ್ದಾರರು ಸೇರಿದಂತೆ ಇನ್ನೀತರರು ಇದ್ದರು.