ಬಳ್ಳಾರಿ: ಬಾರ್ ಆಂಡ್ ರೆಸ್ಟೋರೆಂಟ್ ಗಳ ಮೇಲೆ ಅನಿರೀಕ್ಷಿತ ದಾಳಿ

ಲೋಕದರ್ಶನ ವರದಿ

ಬಳ್ಳಾರಿ 06: ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ (ನಿಷೇಧ ಹಾಗೂ ನಿಯಂತ್ರಣ) 1986  ಕಾಯ್ದೆಯ ಕಾಲಂ 3ರ ಅನ್ವಯ ಕಾಮರ್ಿಕ ನಿರೀಕ್ಷಕರಾದ ಎಂ ರವಿದಾಸ್ ಕುಡುತಿನಿ ಪಟ್ಟಣದಲ್ಲಿ ಶ್ವೇತ ಬಾರ್ ಆಂಡ್ ರೆಸ್ಟೋರೆಂಟ್ ಮೇಲೆ ಶುಕ್ರವಾರ ಅನಿರೀಕ್ಷಿತ ದಾಳಿ ನಡೆಸಿದರು.  

ಈ ದಾಳಿಯ ಸಂದರ್ಭದಲ್ಲಿ ಶ್ವೇತ ಬಾರ್ ಆಂಡ್ ರೆಸ್ಟೋರೆಂಟ್ನಲ್ಲಿ 10 ವರ್ಷದ ಬಾಲಕನನ್ನು ಕೆಲಸಕ್ಕೆ ನೇಮಿಸಿಕೊಂಡು ದುಡಿಸಿಕೊಳ್ಳುವುದು ಕಂಡುಬಂದಿದ್ದು ಹೀಗಾಗಿ ಬಾಲ ಹಾಗೂ ಕಿಶೋರ ಕಾರ್ಮಿಕ(ನಿಷೇಧ ಮತ್ತು ನಿಯಂತ್ರಣ 1986 ಕಾಲಂ 3 ಯನ್ನು ಉಲ್ಲಂಘಿಸಿ ಸದರಿ ಕಾಯ್ದೆಯ 14(1)ರನ್ವಯ ಶಿಕ್ಷಾರ್ಹ ಅಪಾರಾಧವಾಗಿರುತ್ತದೆ.

ಈ ಬಗ್ಗೆ ಸದರಿ ಕಾಯ್ದೆಯಡಿ ಹತ್ತಿರದ ಠಾಣಾಧಿಕಾರಿ ಕುಡುತಿನಿ ಪೊಲೀಸ್ ಠಾಣೆಯಲ್ಲಿ ಭಾರ್ ಅಂಡ್ ರೆಸ್ಟೋರೆಂಟ್ ಮಾಲಿಕನ ಮೇಲೆ ಪ್ರಕರಣ ದಾಖಲಿಸಲಾಗಿದೆ.

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ನಿಯೋಜಿಸಿಕೊಳ್ಳುವುದು ಹಾಗೂ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಇನ್ನು ಮುಂದೆ ಜಿಲ್ಲೆಯಲ್ಲಿ ಅನಿರೀಕ್ಷಿತ ದಾಳಿಗಳನ್ನು ನಡೆಸಲಾಗುವುದು ಎಂದು ಅವರು ತಿಳಿಸಿದರು.

ಬಾಲಕಾರ್ಮಿಕರನ್ನು ನೇಮಕ ಮಾಡಿಕೊಂಡ ಮಾಲೀಕರಿಗೆ ಕಾನೂನಿನಲ್ಲಿ 20,000/- ರಿಂದ 50,000/- ರವರೆಗೆ ದಂಡ ಅಥವಾ 06 ತಿಂಗಳಿಂದ 2 ವರ್ಷದವರೆಗೆ ಜೈಲು ಶಿಕ್ಷೆ ಇದೆ ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದರು. 

ಈ ಸಂದರ್ಭದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಅಧಿಕಾರಿಗಳು, ಕುಡುತಿನಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿಗಳು ಹಾಗೂ ಇತರರು ಉಪಸ್ಥಿತರಿದ್ದರು.