ಬಳ್ಳಾರಿ: ಮತ್ತೋರ್ವ ರೋಗಿ ಗುಣಮುಖ, ಆಸ್ಪತ್ರೆಯಿಂದ ಬಿಡುಗಡೆ
ಬಳ್ಳಾರಿ, ಮೇ 3,ಕೊರೋನಾ ಸೊಂಕಿತ ಜಿಲ್ಲೆಯ ಇನ್ನೋರ್ವ ಇಂದು ಗುಣಮುಖರಾದ ಹಿನ್ನೆಲೆಯಲ್ಲಿ ಕೋವಿಡ್ ಜಿಲ್ಲಾಸ್ಪತ್ರೆಯಿಂದ ಮಾಡಲಾಯಿತು.ಜಿಲ್ಲೆಯಲ್ಲಿ ಇದುವರೆಗೆ 13 ಜನ ಸೋಂಕಿತರಾಗಿದ್ದರು. ಅವರಲ್ಲಿ ಈ ಮೊದಲು ಗುಣಮುಖರಾದ ಪಿ-89, ಪಿ-91 ಮತ್ತು ಪಿ-141 ನಂತರ ಪಿ-90 ಮತ್ತು ಪಿ-151 ಅವರನ್ನು ಬಿಡುಗಡೆ ಮಾಡಲಾಗಿತ್ತು. ಮತ್ತೆ ಇನ್ನಿಬ್ಬರನ್ನು 21 ವರ್ಷ ವಯಸ್ಸಿನ ಪಿ-333 ಮತ್ತು 24 ವರ್ಷದ ಪಿ- 337 ಅವರನ್ನು ಗುಣಮುಖರಾದ ಹಿನ್ನೆಲೆ ಎರಡು ದಿನಗಳ ಹಿಂದೆ ಬಿಡುಗಡೆ ಮಾಡಲಾಗಿತ್ತು. ಭಾನುವಾರ ಗುಣಮುಖರಾದ ಹೊಸಪೇಟೆಯ ಪಿ-336 ಅವರನ್ನು ಬಿಡುಗಡೆ ಮಾಡಲಾಯಿತು.ಇವರು ಸಹ ಹೊಸಪೇಟೆ ನಗರಕ್ಕೆ ಸೇರಿದವರಾಗಿದ್ದು, ಈ ಮುಂಚೆ ಬಿಡುಗಡೆಯಾದ ಜಿಲ್ಲೆಯ ಮೊದಲ ಸೊಂಕಿತರ ಪ್ರಥಮ ಸಂಪರ್ಕಿತರಾಗಿದ್ದಾರೆ.
ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ಗುಣಮುಖರಾಗಿ ಮನೆಯತ್ತ ತೆರಳಲು ಸಿದ್ದರಾಗಿ ನಿಂತಿದ್ದ ಪಿ-336 ಅವರಿಗೆ ಹೂಗುಚ್ಛ ನೀಡಿ, ಹಣ್ಣು-ಹಂಪಲು ನೀಡಿ ಚಪ್ಪಾಳೆ ತಟ್ಟಿ ಅಭಿನಂದಿಸಿದರು. ನಂತರ ಅವರಿಗೆ ಪಡಿತರ ಕಿಟ್ ಕಳುಹಿಸಿಕೊಡಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಎನ್.ಬಸರೆಡ್ಡಿ ಅವರು ಮಾತನಾಡಿ, ಇವರು ಬಂದಾಗ ಸಾಕಷ್ಟು ಭಯಭೀತರಾಗಿದ್ದರು, ಇವರಿಗೆ ಆಪ್ತ ಸಮಾಲೋಚನೆ ಮಾಡಿ ಅವರಲ್ಲಿದ್ದ ಭಯ ಹೋಗಲಾಡಿಸಿ,ಚಿಕಿತ್ಸೆ ನೀಡಿದೇವು, ಅವರು ಇಂದು ಗುಣಮುಖರಾಗಿ ಹೊರಬಂದಿದ್ದಾರೆ ಎಂದರು.
ಇವರನ್ನು 14 ದಿನಗಳವರೆಗೆ ಹೋಮ್ ಕ್ವಾರಂಟೈನ್ ಮತ್ತು 14 ದಿನಗಳ ಕಾಲ ಸೆಲ್ಪ್ ರಿಪೋರ್ಟಿಂಗ್ ಮಾಡಲಾಗುವುದು ಹಾಗೂ ಜಿಲ್ಲಾ ಕಂಟ್ರೋಲ್ ರೂಂ ಮತ್ತು ನಮ್ಮ ರ್ಯಾಪಿಡ್ ರಿಸ್ಪಾನ್ಸ್ ತಂಡದಿಂದ 28 ದಿನಗಳ ಕಾಲ ನಿಗಾವಹಿಸಲಾಗುವುದು ಎಂದು ತಿಳಿಸಿದ ಅವರು, ಈ ಆರ್‍ಆರ್‍ಟಿ ತಂಡಗಳು ಗುಣಮುಖರಾಗಿರುವ ಈ ಜನರ ಮನೆಗಳ ಸುತ್ತಮುತ್ತಲಿನ ಮನೆಯವರಿಗೆ ಕೊರೊನಾ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಗುಣಮುಖರಾಗಿ ಹೊರಬಂದ ಪಿ- 336 ಅವರು ತೀವ್ರ ಭಾವುಕರಾದರು. ನಂತರ ಮಾತನಾಡಿದ ಅವರು ಆಸ್ಪತ್ರೆಗೆ ದಾಖಲಾಗಿ ಬಂದಾಗಿನಿಂದ ಇಲ್ಲಿಯವರೆಗೆ ಚೆನ್ನಾಗಿ ನೋಡಿಕೊಂಡರು. ಸಮರ್ಪಕ ಚಿಕಿತ್ಸೆ ಕೊಟ್ಟರು ನಮ್ಮನ್ನು ಮಾನಸಿಕವಾಗಿಯೂ ಸಜ್ಜುಗೊಳಿಸಿದರು. ಮತ್ತು ಗುಣಮಟ್ಟ ಆಹಾರ ಒದಗಿಸಿದರು. ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಯ ಋಣವನ್ನು ನಾವೆಂದು ಮರೆಯುವುದಿಲ್ಲ ಎಂದರು.ಈ ಸಂದರ್ಭದಲ್ಲಿ ಕೋವಿಡ್ ನೋಡಲ್ ಅಧಿಕಾರಿ ಡಾ.ಮಲ್ಲಿಕಾರ್ಜುನ, ಡಾ.ಅನಿಲ್,ಡಾ.ಲಿಂಗರಾಜು,ಡಾ.ವಿಜಯ ಶಂಕರ್, ಡಾ.ಸುನೀಲ್, ಡಾ. ವಿನಯ್, ಡಾ.ಸುಜಾತಾ,ಶುಶ್ರೂಷಾ ಅಧೀಕ್ಷಕಿ ಶಾಂತಾಬಾಯಿ,ಡಾ.ಚಿತ್ರಶೇಖರ್, ಡಾ.ಉಮಾಮಹೇಶ್ವರಿ ಸೇರಿದಂತೆ ವೈದ್ಯಕೀಯ ಸಿಬ್ಬಂದಿ ಇದ್ದರು.
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ 