ಬಳ್ಳಾರಿ: ಬೆಳೆಗಳ ಬೆಲೆ ಸಮಸ್ಯೆ: ಸಕರ್ಾರಕ್ಕೆ ಶಿಫಾರಸ್ಸು
ಬಳ್ಳಾರಿ 19: ರೈತರ ಬೆಳೆಗಳ ಬೆಲೆ ಹಾಗೂ ಬೆಲೆ ಸಮಸ್ಯೆಗೆ ಸಂಬಂಧಿಸಿದಂತೆ ಕೃಷಿ ಬೆಲೆ ಆಯೋಗದಿಂದ ಸಕರ್ಾರಕ್ಕೆ ಶಿಫಾರಸ್ಸು ಮಾಡಲಾಗುವುದು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕ್ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಕೃಷಿ, ತೋಟಗಾರಿಕೆ ಬೆಳೆಗಳ ಮಾರುಕಟ್ಟೆ, ಖರೀದಿ ಮತ್ತು ಬೆಲೆಗಳ ಕುರಿತ ವಿಚಾರ ತಜ್ಞರು, ರೈತ ಮುಖಂಡರು ಹಾಗೂ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದರು.
ವಿವಿಧ ಬೆಳೆಗಳ ಬೆಲೆಗೆ ಸಂಬಂಧಿಸಿದಂತೆ ಆಯೋಗ ಅಂತಿಮ ನಿರ್ಧಾರ ಕೈಗೊಳ್ಳಲು ಬರುವುದಿಲ್ಲ ಎಂದು ವಿವರಿಸಿದ ಅಧ್ಯಕ್ಷ ಹನುಮನಗೌಡ ಅವರು ಬೆಂಬಲ ಬೆಲೆ ಘೋಷಿಸಿದ ನಂತರ ರೈತರು ಮಾರುಕಟ್ಟೆಗೆ ಬರುವುದು ತುಂಬಾ ವಿರಳವಾಗಿದೆ. ಹಾಗಾಗೀ ನಮ್ಮ ಕೃಷಿ ಬೆಲೆ ಆಯೋಗದಿಂದ ರೈತರು ಬೆಳೆದ ಬೆಳೆಯನ್ನು ರೈತನ ಮನೆಯಿಂದ ನೇರವಾಗಿ ಖರೀದಿಸಿ ಅದನ್ನು ಎ.ಪಿ.ಎಂ.ಸಿ ಮಾರುಕಟ್ಟೆ ತರುವ ವ್ಯವಸ್ಥೆಯನ್ನು ಹಾಕಿಕೊಳ್ಳಲಾಗಿದ್ದು, ಈ ಶಿಫಾರಸ್ಸನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಿದ್ದೇವೆ ಎಂದರು.
ಈ ಸಂದರ್ಭದಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ರೈತಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 