ಬಳ್ಳಾರಿ: ಅಂತರ್ರಾಜ್ಯ ಗಡಿ ಬಳಿ 11 ಚಕ್ಪೋಸ್ಟಗಳ ಸ್ಥಾಪನೆ: ಡಾ.ವಿ.ರಾಮಪ್ರಸಾತ್
ಬಳ್ಳಾರಿ 14: ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಸುವ್ಯವಸ್ಥಿತವಾಗಿ ಜರುಗಿಸುವ ನಿಟ್ಟಿನಲ್ಲಿ ಜಿಲ್ಲಾ ಚುನಾವಣಾ ಆಯೋಗ ಸಕಲ ಸಿದ್ಧತೆಗಳನ್ನು ಈಗಾಗಲೇ ಕೈಗೊಂಡಿದ್ದು, ಬಳ್ಳಾರಿ ಜಿಲ್ಲೆಗೆ ಹೊಂದಿಕೊಂಡಿರುವ ಆಂಧ್ರಪ್ರದೇಶದ ಕರ್ನ್ಯೂರಲ್ ಮತ್ತು ಅನಂತಪುರ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳಲ್ಲಿ 11 ಚೆಕ್ಪೋಸ್ಟಗಳನ್ನು ಸ್ಥಾಪಿಸಲಾಗಿದೆ ಮತ್ತು ಸಂಚರಿಸುವ ವಾಹನಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.
ಬಳ್ಳಾರಿ ಲೋಕಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಕರ್ನಾಟಕ ಮತ್ತು ಆಂಧ್ರಪ್ರದೇಶದ ಅಂತರ್ರಾಜ್ಯ ಕರ್ನ್ಯೂರಲ್ ಸಮನ್ವಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಬಳ್ಳಾರಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 8 ವಿಧಾನಸಭಾ ಕ್ಷೇತ್ರಗಳು ಜಿಲ್ಲೆಯ ಸಿರಗುಪ್ಪ ವಿಧಾನಸಭಾ ಕ್ಷೇತ್ರವು ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಈ ಜಿಲ್ಲೆಯಲ್ಲಿ ಒಟ್ಟು 10 ತಾಲೂಕುಗಳಿದ್ದು, ಅದರಲ್ಲಿ ಬಳ್ಳಾರಿ ಮತ್ತು ಸಂಡೂರು ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಮತ್ತು ಸಿರಗುಪ್ಪ ತಾಲೂಕು ಆಂಧ್ರದ ಜಿಲ್ಲೆಗೆ ಗಡಿಯನ್ನು ಹಂಚಿಕೊಂಡಿದೆ ಎಂದರು.
ಬಳ್ಳಾರಿ ಜಿಲ್ಲೆಯಲ್ಲಿ ಒಟ್ಟು 36 ಚೆಕ್ಪೋಸ್ಟ್ಗಳನ್ನು ಈಗಾಗಲೇ ಸ್ಥಾಪಿಸಲಾಗಿದ್ದು, ಅದರಲ್ಲಿ ಜಿಲ್ಲಾ ಹೆದ್ದಾರಿಗಳಲ್ಲಿ 25 ಚೆಕ್ಪೋಸ್ಟ್ಗಳು ಮತ್ತು 11 ಅಂತರ್ರಾಜ್ಯ ಸಂಪರ್ಕ ಕಲ್ಪಿಸುವ ಗಡಿರಸ್ತೆಗಳಲ್ಲಿ ಚೆಕ್ಪೋಸ್ಟ್ಗಳು ಸ್ಥಾಪಿಸಿ ಮದ್ಯ,ಹಣ ಸೇರಿದಂತೆ ಇನ್ನೀತರ ಸಾಗಾಣಿಕೆ ವಸ್ತುಗಳ ಮೇಲೆ ಕಣ್ಣಿಡಲಾಗಿದೆ ಎಂದು ವಿವರಿಸಿದರು. ಚುನಾವಣೆಯನ್ನು ಶಾಂತಿ ಮತ್ತು ಸುವ್ಯವಸ್ಥಿತ ರೀತಿಯಲ್ಲಿ ಯಾವುದೇ ರೀತಿಯಲ್ಲಿ ತೊಂದರೆಗಳಾಗದಂತೆ ನಡೆಸುವ ನಿಟ್ಟಿನಲ್ಲಿ ಅಬಕಾರಿ ಅಧಿಕಾರಿಗಳಲ್ಲಿ ಮನವಿ ಮಾಡಿದರು.
ಗಡಿಯಲ್ಲಿ ಮದ್ಯ ಮಾರಾಟದಲ್ಲಿ ಹೆಚ್ಚಳ ಮತ್ತು ಸಾಗಾಣಿಕೆ ಪ್ರಮಾಣದಲ್ಲಿ ಹೆಚ್ಚಳದ ಕುರಿತು ಅನಂತಪುರ, ಕರ್ನ್ಯೂರಲ್ ಮತ್ತು ಬಳ್ಳಾರಿ ಜಿಲ್ಲೆಯ ಅಬಕಾರಿ ಇಲಾಖೆಯ ಅಧಿಕಾರಿಗಳು ಪ್ರತಿನಿತ್ಯ ಮಾಹಿತಿ ವಿನಿಮಯ ಮಾಡಿಕೊಳ್ಳಬೇಕು ಮತ್ತು ಇದಕ್ಕೆ ತಕ್ಕ ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಹೇಳಿದರು ಬಳ್ಳಾರಿ ಜಿಲ್ಲೆಯು ರಾಜಕೀಯವಾಗಿ ಮತ್ತು ಆರ್ಥಿಕವಾಗಿ ಆಂಧ್ರಪ್ರದೇಶದೊಂದಿಗೆ ಬಹಳಷ್ಟು ಸಂಬಂಧ ಹೊಂದಿದ್ದು, ಬಳ್ಳಾರಿ ಲೋಕಸಭಾ
ಅಂತರ್ರಾಜ್ಯ ಗಡಿ ಬಳಿ 11 ಚೆಕ್ಪೋಸ್ಟ್ಗಳಿವು: ಸಿರಗುಪ್ಪ ತಾಲೂಕಿನಲ್ಲಿ ಕೆ.ಬೆಳಗಲ್ಲು, ಇಟಗಿಹಾಳ್, ವತ್ತುಮುರಣಿ, ಮಾಟಸೂಗುರ. ಬಳ್ಳಾರಿ ತಾಲೂಕಿನ ಹಲಕುಂದಿ, ಎತ್ತಿನಬೂದಿಹಾಳ್, ರೂಪನಗುಡಿ, ,ಜೋಳದರಾಶಿ,ಕರೆಕಲ್ಲು, ಸಿಂಧುವಾಳ. ಸಂಡೂರು ತಾಲೂಕಿನ ಎಂ.ಗಂಗಲಾಪುರ(ದಿಕ್ಕಲದಿನ್ನಿ)ದಲ್ಲಿ ಚೆಕ್ಪೋಸ್ಟ್ಗಳು ಸ್ಥಾಪಿಸಿ ಆಂಧ್ರದ ಕಡೆಯಿಂದ ಬರುವ ವಾಹನಗಳ ಮೇಲೆ ಹದ್ದಿನಕಣ್ಣೀಡಲಾಗಿದೆ ಎಂದು ಡಿಸಿ ರಾಮ್ ಪ್ರಸಾತ್ ವಿವರಿಸಿದರು.
ರೌಡಿಶೀಟರ್ಗಳ ಮಾಹಿತಿ ವಿನಿಮಯ:
ಜಿಲ್ಲೆಯ ಗಡಿಹಳ್ಳಿಗಳ ಮೂಲಕ ಆಂಧ್ರಪ್ರದೇಶದ ರೌಡಿಶೀಟರ್ಗಳು ನುಸುಳಿ ಇಲ್ಲಿನ ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದ್ದು, ಕಾನೂನು ಮತ್ತು ಸುವ್ಯವಸ್ಥೆಗೆ ಹಾಗೂ ಶಾಂತಿಯುತ ಚುನಾವಣೆಗೆ ಧಕ್ಕೆಯಾಗುವ ಸಾಧ್ಯತೆ ಇದೆ ಎಂದು ವಿವರಿಸಿದ ಎಸ್ಪಿ ಅರುಣ ರಂಗರಾಜನ್ ಅವರು, ಕೂಡಲೇ ತಾವು ತಮ್ಮ ಜಿಲ್ಲೆಗಳ ರೌಡಿಶೀಟರ್ಗಳ ಮಾಹಿತಿಯನ್ನು ಚಿತ್ರಸಮೇತ ವಿನಿಮಯ ಮಾಡಿಕೊಳ್ಳಬೇಕು ಹಾಗೂ ನಮ್ಮ ಜಿಲ್ಲೆಯ ಗಡಿ ಬಳಿಯ ಪೊಲೀಸ್ ಠಾಣೆಗಳಲ್ಲಿ ರೌಡಿಶೀಟರ್ ಪಟ್ಟಿಯಲ್ಲಿರುವವರ ಹೆಸರನ್ನು ಆಂಧ್ರದ ಅಧಿಕಾರಿಗಳೊಂದಿಗೆ ವಿನಿಮಯ ಮಾಡಿಕೊಳ್ಳಿ ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಬಳ್ಳಾರಿ ಅಪರ ಜಿಲ್ಲಾಧಿಕಾರಿ ಸತೀಶಕುಮಾರ,ಅಪರ ಪೊಲೀಸ್ ವರಿಷ್ಠಾಧಿಕಾರಿ ಲಾವಣ್ಯ, ಬಳ್ಳಾರಿ ಅಬಕಾರಿ ಉಪ ಅಧೀಕ್ಷಕ ವಿನೋದ ಡಾಂಗೆ, ಬಳ್ಳಾರಿ, ಅನಂತಪುರ, ಕರ್ನ್ಯೂರಲ್ ಜಿಲ್ಲೆಗಳ ಪೊಲೀಸ್,ಕಂದಾಯ,ಅಬಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.