ಬಳ್ಳಾರಿ: ನಿರಂತರ ಕುಡಿಯುವ ನೀರು ಸರಬರಾಜಗೆ ಸೂಚನೆ
ಲೋಕದರ್ಶನ ವರದಿ
ಬಳ್ಳಾರಿ 20: ನಗರದ 20 ವಲಯಗಳಿಗೆ ಅ.1ರಿಂದ ನಿರಂತರ ಕುಡಿಯುವ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಡಿಸಿ ನಕುಲ್ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಿರಂತರ ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಿರಂತರ 247 ಕುಡಿಯುವ ನೀರು ಸರಬರಾಜನ್ನು ಮೊದಲ ಹಂತವಾಗಿ ನಗರದ 20 ವಲಯಗಳಿಗೆ ಸರಬರಾಜು ಮಾಡಬೇಕು. ಅದರ ಜತೆಗೆ ಹೊಸಪೇಟೆಯ 11 ವಲಯಗಳಿಗೂ ಸರಬರಾಜು ಮಾಡುವುದಕ್ಕೆ ಮುಂದಾಗಬೇಕು ಎಂದು ಅವರು ಸೂಚಿಸಿದರು.
ಬಳ್ಳಾರಿ ನಗರಕ್ಕೆ ನೀರು ಸರಬರಾಜು ಮಾಡುವ ನಿಟ್ಟಿನಲ್ಲಿ ಅಮೃತ್ ಯೋಜನೆ ಅಡಿ ಮೋಕಾ ಬಳಿ ಹೊಸದಾಗಿ ನಿರ್ಮಿಸಲಾಗುತ್ತಿರುವ 800 ಎಂಎಲ್ಡಿ ಕೆರೆಯ ಕಾಮಗಾರಿಯಲ್ಲಿ ಶೇ.50ರಷ್ಟು ಬರುವ ಫೆಬ್ರುವರಿಯೊಳಗೆ ಪೂರ್ಣಗೊಳಿಸಿ ಎಂದರು.
ಅಮೃತ ಸ್ಕೀಂ ಸೇರಿದಂತೆ ವಿವಿಧ ಯೋಜನೆಗಳಡಿ ಕೈಗೆತ್ತಿಕೊಳ್ಳಲಾಗಿರುವ ಕುಡಿಯುವ ನೀರು ಸರಬರಾಜು ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು ಈ ಸಂದರ್ಭದಲ್ಲಿ ನಡೆಸಿದ ಜಿಲ್ಲಾಧಿಕಾರಿಗಳು, ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಕನರ್ಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಚೀಫ್ ಎಂಜನಿಯರ್ ದಿನೇಶ ಹಾಗೂ ದೊಡ್ಡಿಹಳ್ಳಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ನಿದರ್ೇಶಕ ರಮೇಶ ಸೇರಿದಂತೆ ಎಂಜನಿಯರ್ಗಳು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 