ಬಳ್ಳಾರಿ: ಲೋಕಸಭಾ ಕ್ಷೇತ್ರ ಚುನಾವಣೆ ಸಿದ್ಧತೆ ಪರಿಶೀಲನೆ ಎಲೆಕ್ಷನ್

ಬಳ್ಳಾರಿ: ಲೋಕಸಭಾ ಕ್ಷೇತ್ರ ಚುನಾವಣೆ ಸಿದ್ಧತೆ ಪರಿಶೀಲನೆ ಎಲೆಕ್ಷನ್

ಬಳ್ಳಾರಿ 12: ಲೋಕಸಭಾ ಚುನಾವಣೆಯನ್ನು ಅತ್ಯಂತ ನಿಷ್ಪಕ್ಷಪಾತವಾಗಿ ಮತ್ತು ಸುಸೂತ್ರವಾಗಿ ಜರುಗಿಸುವ ನಿಟ್ಟಿನಲ್ಲಿ ಎಲ್ಲರು ತಂಡವಾಗಿ ಕೆಲಸ ಮಾಡಬೇಕು ಮತ್ತು ಚುನಾವಣಾ ಆಯೋಗ ನೀಡಲಾಗಿರುವ ಸ್ಪಷ್ಟ ನಿದರ್ೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಯಾವುದೇ ರೀತಿಯ ಲೋಪಗಳಾಗದಂತೆ ಎಚ್ಚರವಹಿಸಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕು ಎಂದು ಪ್ರಾದೇಶಿಕ ಚುನಾವಣಾಧಿಕಾರಿಗಳಾಗಿರುವ ಪ್ರಾದೇಶಿಕ ಆಯುಕ್ತ ಸುಬೋದ್ ಯಾದವ್ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕರೆದಿದ್ದ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು ಹಾಗೂ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಹಾಯಕ ಚುನಾವಣಾಧಿಕಾರಿಗಳು ಮತ್ತು ಚುನಾವಣೆಗೆ ಸಂಬಂಧಿಸಿದಂತೆ ರಚಿಸಲಾದ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳಿಗೆ ಅವರ ಸಮಿತಿಯ ಕಾರ್ಯವೈಖರಿ ಅರಿವಿದ್ದರೇ ಸಾಲದು; ಆ ಸಮಿತಿಯಲ್ಲಿನ ಎಲ್ಲ ಸದಸ್ಯರಿಗೆ ಸಮಿತಿಯ ಹೊಣೆಗಾರಿಕೆ ಮತ್ತು ತಮ್ಮ ಜವಾಬ್ದಾರಿಗಳ ಕುರಿತು ಸಂಪೂರ್ಣ ಅರಿವಿರಬೇಕು. ಅಂದಾಗಲೇ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಸಾಧ್ಯ. ಈ ನಿಟ್ಟಿನಲ್ಲಿ ಅವರನ್ನು ಸಜ್ಜುಗೊಳಿಸಿ ಎಂದರು.

ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಹಾಗೂ ಕಡಿಮೆ ಮತದಾನ ಕೇಂದ್ರಗಳಲ್ಲಿ ಮತದಾನ ಪ್ರಮಾಣವನ್ನು ಹೆಚ್ಚಿಗೆ ಮಾಡುವ ದೃಷ್ಟಿಯಿಂದ ಒಟ್ಟಾರೆ 17 ಪಿಂಕ್/ಸಖಿ ಮತಗಟ್ಟೆಗಳನ್ನು ಸ್ಥಾಪಿಸಲು ಮತಗಟ್ಟೆಗಳನ್ನು ಈಗಾಗಲೇ ಗುರುತಿಸಲಾಗಿದೆ ಎಂದರು.

ಜಿಲ್ಲೆಯಲ್ಲಿ ಇವಿಎಂ ಮತ್ತು ವಿವಿಪ್ಯಾಟ್ ಬಗ್ಗೆ ಜಾಗೃತಿ ಮೂಡಿಸಲು 223 ತಂಡಗಳನ್ನು ರಚನೆ ಮಾಡಲಾಗಿದೆ. ಪ್ರತಿ ದಿನ 91 ಇವಿಎಂ ಮತ್ತು ವಿವಿಪ್ಯಾಟ್ಗಳ ಮೂಲಕ ಜಿಲ್ಲಾ,ತಾಲೂಕು ಹಾಗೂ ಮತಗಟ್ಟೆ ಮಟ್ಟದಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಮಾ.15ರೊಳೆ ಎಲ್ಲ ಮತಗಟ್ಟೆ ಪ್ರದೇಶಗಳಲ್ಲಿ ಜಾಗೃತಿ ಮೂಡಿಸಲಾಗುವುದು ಎಂದು ಅವರು ತಿಳಿಸಿದರು. ಐಜಿಪಿ ನಂಜುಂಡಸ್ವಾಮಿ ಮಾತನಾಡಿದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಕೆ.ನಿತೀಶ್, ಅಪರ ಜಿಲ್ಲಾಧಿಕಾರಿ ಸತೀಶಕುಮಾರ ಸೇರಿದಂತೆ ಎಆರ್ಒಗಳು, ವಿವಿಧ ಸಮಿತಿ ನೋಡಲ್ ಅಧಿಕಾರಿಗಳು ಭಾಗವಹಿಸಿದ್ದರು.


ಸುದ್ದಿ ಓದಿ