ಬಳ್ಳಾರಿ: ಲೋಕಸಭಾ ಚುನಾವಣೆ: ಬ್ಯಾಂಕ್ ಅಧಿಕಾರಿಗಳ ಸಭೆ

ಬಳ್ಳಾರಿ: ಲೋಕಸಭಾ ಚುನಾವಣೆ: ಬ್ಯಾಂಕ್ ಅಧಿಕಾರಿಗಳ ಸಭೆ

ಬಳ್ಳಾರಿ 16: ಬ್ಯಾಂಕ್ಗಳಲ್ಲಿ ಒಂದುಲಕ್ಷಕ್ಕಿಂತ ಹೆಚ್ಚು ಹಣ ಜಮಾ ಮಾಡಿದರೆ ಮತ್ತು ಡ್ರಾ ಮಾಡಿದರೇ ಅವುಗಳ ವರದಿಯನ್ನು ಪ್ರತಿನಿತ್ಯ ನೀಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಡಾ.ವಿ.ರಾಮ್ ಪ್ರಸಾತ್ ಮನೋಹರ್ ಅವರು ಬ್ಯಾಂಕ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಬ್ಯಾಂಕ್ ಮ್ಯಾನೇಜರ್ಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎನ್ಜಿಒ ಖಾತೆಗಳ ಮೇಲೆಯೂ ನಿಗಾ: ಚುನಾವಣಾ ಸಂದರ್ಭದಲ್ಲಿ ಅಭ್ಯಥರ್ಿಗಳು ಸ್ವ ಸಹಾಯ ಸಂಘಗಳು ಮತ್ತು ಎನ್ಜಿಒ ಸದಸ್ಯರ ಓಲೈಕೆ ಮಾಡಲಿದ್ದಾರೆ. ಇಂತಹ ಸಂದರ್ಭದಲ್ಲಿ ಎನ್ಜಿಒ ಮತ್ತು ಸ್ವಸಹಾಯ ಸಂಘಗಳ ಖಾತೆಗಳಿಗೆ ಹೆಚ್ಚಿನ ಹಣ ಹರಿದು ಬರುವ ಸಾಧ್ಯತೆ ಇದ್ದು,ಅವುಗಳ ಖಾತೆ ಮೇಲೆ ಹೆಚ್ಚಿನ ನಿಗಾವನ್ನು ಬ್ಯಾಂಕ್ಗಳು ವಹಿಸಬೇಕು ಮತ್ತು ಅಂತಹ ಸಂಶಯಾಸ್ಪದ ಕಂಡುಬಂದಲ್ಲಿ ತಕ್ಷಣ ನಮ್ಮ ಗಮನಕ್ಕೆ ತರಬೇಕು ಎಂದು ಹೇಳಿದ ಅವರು, ಇವುಗಳ ಖಾತೆಗೆ ಕನಿಷ್ಠ 50 ಸಾವಿರ ಹಣ ಸಂಗ್ರಹವಾದರೂ ಮಾಹಿತಿ ನೀಡಿ ಎಂದು ಸೂಚಿಸಿದರು.

ಶಾಂತಿ ಮತ್ತು ನಿಷ್ಪಕ್ಷಪಾತ ಚುನಾವಣೆ ನಡೆಯುವ ನಿಟ್ಟಿನಲ್ಲಿ ಜನರ ಸೇವೆ ಮಾಡುವ ತಾವು ನಮ್ಮೊಂದಿಗೆ ಸಹಕರಿಸಬೇಕು ಎಂದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣ ರಂಗರಾಜನ್ ಅವರು ಮಾತನಾಡಿದರು.

ಈ ಸಂದರ್ಭದಲ್ಲಿ ಲೀಡ್ ಬ್ಯಾಂಕ್ ಅಧಿಕಾರಿಗಳು ಮತ್ತು ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಬ್ಯಾಂಕ್ ಅಧಿಕಾರಿಗಳು ಇದ್ದರು 

ಸುದ್ದಿ ಓದಿ