ಬಳ್ಳಾರಿ: ಡಿಸಿ ಕಚೇರಿ ಆವರಣದಲ್ಲಿ ಸಂಸದರ ಕಚೇರಿ ಉದ್ಘಾಟನೆ ತುಂಗಭದ್ರಾ ಡ್ಯಾಂ ಹೂಳೆತ್ತುವುದಕ್ಕೆ ಕ್ರಮ: ದೇವಿಂದ್ರಪ್ಪ
ಬಳ್ಳಾರಿ 03: ಜನರ ಜೀವನಾಡಿ ತುಂಗಾಭದ್ರಾ ಜಲಾಶಯದಲ್ಲಿ 33 ಟಿಎಂಸಿ ಹೂಳು ತುಂಬಿಕೊಂಡಿದ್ದು, ಅದನ್ನು ಎತ್ತುವುದಕ್ಕೆ ಸಂಬಂಧಿಸಿದಂತೆ ಕ್ರಮಕೈಗೊಳ್ಳಲಾಗುವುದು ಎಂದು ಬಳ್ಳಾರಿ ನೂತನ ಸಂಸದ ವೈ.ದೇವಿಂದ್ರಪ್ಪ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಂಸದರ ಕಚೇರಿ ಉದ್ಘಾಟಿಸಿ, ಪೂಜೆ ನೆರವೇರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ತುಂಗಭದ್ರಾ ಜಲಾಶಯದಲ್ಲಿರುವ ಹೂಳೆತ್ತುವುದಕ್ಕೆ ಸಂಬಂಧಿಸಿದಂತೆ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಸಂಸದರೊಂದಿಗೆ ಚಚರ್ಿಸಲಾಗಿದ್ದು, ನಮ್ಮ ರಾಜ್ಯದ ಸಚಿವರ ಮೂಲಕ ಮಾನ್ಯ ಪ್ರಧಾನ ಮಂತ್ರಿಗಳ ಗಮನಕ್ಕೆ ತಂದು ಕ್ರಮವಹಿಸಲಾಗುವುದು. ಸದ್ಯದ ವರದಿಗಳು ಹೂಳೆತ್ತಲು ಆಗುವುದಿಲ್ಲ ಅಂತ ವರದಿ ನೀಡಿದಾಗಿಯೂ ಪರ್ಯಾಯ ಮಾರ್ಗಗಳನ್ನು ಹುಡುಕಿ ಕ್ರಮವಹಿಸಲಾಗುತ್ತದೆ ಎಂದು ಅವರು ಸ್ಪಷ್ಟಪಡಿಸಿದರು.
ನನ್ನ ಮೇಲೆ ನಿರೀಕ್ಷೆ ಇಟ್ಟುಕೊಂಡು ಜಿಲ್ಲೆಯ ಜನರು ನನ್ನನ್ನು ಆಯ್ಕೆಮಾಡಿ ಕಳುಹಿಸಿದ್ದು, ಅವರ ನಿರೀಕ್ಷೆಗೆ ತಕ್ಕಂತೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಪ್ರಯತ್ನಿಸಲಾಗುವುದು. ಜಿಲ್ಲೆಯಲ್ಲಿ ನನೆಗುದಿಗೆ ಬಿದ್ದಿರುವ ಯೋಜನೆಗಳ ಪೂರ್ಣಗೊಳಿಸುವುದಕ್ಕೆ ಕ್ರಮವಹಿಸಲಾಗುವುದು. ಜಿಲ್ಲೆಯ ಕೆರೆ-ಕಟ್ಟೆಗಳನ್ನು ಭರ್ತಿ ಮಾಡಲಾಗುವುದು ಎಂದರು.
ಸಂಸದರ ಕಚೇರಿಯಲ್ಲಿ ಸಿಬ್ಬಂದಿ ಉಪಸ್ಥಿತರಿರಲಿದ್ದು, ಜಿಲ್ಲೆಯ ಜನರು ತಮ್ಮ ಕುಂದುಕೊರತೆಗಳನ್ನು ಸಲ್ಲಿಸಬಹುದಾಗಿದೆ. ಇವುಗಳ ಇತ್ಯರ್ಥಕ್ಕೆ ಪ್ರಯತ್ನಿಸಲಾಗುವುದು ಎಂದರು.
ಕಚೇರಿ ಉದ್ಘಾಟನಾ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ವಿ.ರಾಮ್ಪ್ರಸಾತ್ ಮನೋಹರ್, ಸಿರುಗುಪ್ಪ ಶಾಸಕರಾದ ಸೋಮಲಿಂಗಪ್ಪ, ಮೋಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಸೇರಿದಂತೆ ಅನೇಕರು ಇದ್ದರು. ಮುಖ್ಯಮಂತ್ರಿಗಳ ಗ್ರಾಮವಾಸ್ತವ್ಯ ಕಾರ್ಯಕ್ಕೆ ಶ್ರೀರಾಮುಲು ಪ್ರಶಂಸೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಡೆಸಲು ಉದ್ದೇಶಿಸಿರುವ ಗ್ರಾಮವಾಸ್ತವ್ಯ ಕಾರ್ಯಕ್ರಮ ತುಂಬಾ ಒಳ್ಳೆಯದು. ಇದರಿಂದ ಪ್ರಾಕ್ಟಿಕಲ್ ಸಮಸ್ಯೆಗಳ ಅರಿವಾಗಲಿದ್ದು, ಅವುಗಳ ಇತ್ಯರ್ಥಕ್ಕೆ ಕ್ರಮವಹಿಸಲು ಅನುಕೂಲವಾಗುತ್ತದೆ ಎಂದು ಮೋಳಕಾಲ್ಮೂರು ಶಾಸಕ ಬಿ.ಶ್ರೀರಾಮುಲು ಪ್ರಶಂಸೆ ವ್ಯಕ್ತಪಡಿಸಿದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 