ಲೋಕದರ್ಶನ ವರದಿ
ಬಳ್ಳಾರಿ 25: ಸ್ಮಾರಕಗಳು ನಮ್ಮ ನಾಡಿನ ಸಾಂಸ್ಕೃತಿಕ ಪ್ರತಿಬಿಂಬಗಳಾಗಿದ್ದು, ನಮ್ಮ ಪ್ರಾಚೀನ ಕಲೆ, ವಾಸ್ತುಶಿಲ್ಪ ಮತ್ತು ಸಂಸ್ಕೃತಿಯನ್ನು ಅರಿಯಲು ಸಹಾಯಕವಾಗಿವೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಸ.ಚಿರಮೇಶ ಅಭಿಪ್ರಾಯಪಟ್ಟರು. ಕನ್ನಡ ವಿಶ್ವವಿದ್ಯಾಲಯದ ಅಕ್ಷರ ಗ್ರಂಥಾಲಯದ ಮುಂಭಾಗದಲ್ಲಿ ಕನ್ನಡ ವಿಶ್ವವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ಮೈಸೂರಿನ ಪುರಾತತ್ವ, ಸಂಗ್ರಹಾಲಯ ಪರಂಪರೆ ಇಲಾಖೆಯ ಸಹಯೋಗದಲ್ಲಿ ಹಮ್ಮಿಕೊಂಡಿರುವ 3 ದಿನಗಳ ಸ್ಮಾರಕಗಳ ಸ್ವಚ್ಛತೆ ರಕ್ಷಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟೀಯ ಸೇವಾ ಯೋಜನಾ ಘಟಕ ಸಂಚಾಲಕ ಡಾ.ಅಮರೇಶ ಯತಗಲ್ ಪ್ರಾಸ್ತವಿಕವಾಗಿ ಮಾತನಾಡುತ್ತ 3 ದಿನಗಳ ಕಾಲ ಹಮ್ಮಿಕೊಂಡಿರುವ ಸ್ಮಾರಕಗಳ ಸ್ವಚ್ಛತೆ ಹಾಗೂ ರಕ್ಷಣಾ ಕಾರ್ಯಕ್ರಮದಲ್ಲಿ ಹಂಪಿ, ಕಡ್ಡಿರಾಂಪುರ, ಹಳ್ಳಿಕರೆ, ಸೀತಾರಾಮ ತಾಂಡ ಮುಂತಾದ ಸ್ಥಳಗಳಲ್ಲಿರುವ ಒಟ್ಟು 22 ದೇವಾಲಯಗಳನ್ನು ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂಸೇವಕರು ಸ್ವಚ್ಛಗೊಳಿಸುವರು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸಲಹಾ ಸಮಿತಿಯ ಸದಸ್ಯರಾದ ಡಾ.ರವೀಂದ್ರನಾಥ, ಡಾ. ಶಿವಾನಂದ ವಿರಕ್ತಮಠ, ವಿವಿಧ ವಿಭಾಗಗಳ ಡೀನರಾದ ಡಾ.ವೀರೇಶ ಬಡಿಗೇರ್, ಡಾ. ಕೇಶವನ್ ಪ್ರಸಾದ ಮತ್ತು ವಿವಿಧ ವಿಭಾಗಗಳ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.