ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ
ಲೋಕದರ್ಶನ ವರದಿ
ಬಳ್ಳಾರಿ 13: ಪೊಲೀಸ್ ಇಲಾಖೆಯ ಸಿಬ್ಬಂದಿಯವರು ಕರ್ತವ್ಯದ ಜೊತೆಗೆ ಉತ್ತಮ ಹವ್ಯಾಸಗಳನ್ನು ಬೆಳಸಿಕೊಳ್ಳಿ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಕರೆ ನೀಡಿದರು.
ನಗರದ ಡಿ.ಎ.ಆರ್ ಪೊಲೀಸ್ ಕವಾಯತು ಮೈದಾನದಲ್ಲಿ ಶುಕ್ರವಾರ ಬಳ್ಳಾರಿ ಜಿಲ್ಲಾ ಪೊಲೀಸ್ ಇಲಾಖೆಯ ವಾಷರ್ಿಕ ಕ್ರೀಡಾಕೂಟ -2019ಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರತಿಯೊಂದು ಸಭೆ, ಸಮಾರಂಭ, ಕ್ರೈಮ್ನಲ್ಲಿ ಹಾಗೂ ಇತರೆ ಕಾರ್ಯಕ್ರಮಗಳಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಈ ಒತ್ತಡದ ಕೆಲಸದಲ್ಲಿ ಕೌಟುಂಬಿಕ ಜೀವನಕ್ಕೆ ನಿಗದಿತ ಸಮಯ ಅವಕಾಶ ಕಡಿಮೆ ಇರುತ್ತದೆ. ಒತ್ತಡವನ್ನು ಹೊಗಲಾಡಿಸಲು ತಾವುಗಳು ಕುಟುಂಬಕ್ಕೆ ಸಮಯ ನೀಡಬೇಕು ಮತ್ತು ಅವರೊಂದಿಗೆ ಬೆರೆಯಬೇಕು ಎಂದರು.
ಸಾರ್ವಜನಿಕರು ಸುಖ ನಿದ್ರೆ, ನೆಮ್ಮದಿ ಜೀವನ ಸಾಗಿಸುತ್ತಿರುವಲ್ಲಿ ಪೊಲೀಸ್ ಇಲಾಖೆ ಸಿಬ್ಬಂದಿಯ ಪಾತ್ರ ಅತ್ಯಂತ ಪ್ರಶಂಸನೀಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಡಿಸಿ ನಕುಲ್ ಅವರು ಈ ಕ್ರೀಡಾಕೂಟದಲ್ಲಿ ಸಿಬ್ಬಂದಿಗಳು ಸ್ಪೂರ್ತಿಯಿಂದ ಭಾಗವಹಿಸಿ, ಈ ಸಮಯವನ್ನು ತಾವುಗಳು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಕೆ.ಬಾಬಾ ಅವರು ಮಾತನಾಡಿ, ಸಿಬ್ಬಂದಿಗಳು ವರ್ಷದುದ್ದಕ್ಕೂ ಒತ್ತಡದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರತಿದಿನ ಹೊಸ ಹೊಸ ಕ್ರೈಮ್ಗಳು ಸೃಷ್ಟಿಯಾಗುತ್ತಿವೆ, ಈ ಕುರಿತು ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಆರ್ಥಿಕ ವಂಚನೆ, ಮಹಿಳಾ ಮತ್ತು ಮಕ್ಕಳ ರಕ್ಷಣೆ ಹಾಗೂ ಇತರೆ ಕಾರ್ಯಕ್ರಮಗಳ ಕುರಿತು ಸಾರ್ವಜನಿಕರಲ್ಲಿ ವೀಡಿಯೋ ತುಣುಕು, ಕರಪತ್ರಗಳ ಮೂಲಕ ಅರಿವು ಮೂಡಿಸುತ್ತಿದ್ದಾರೆ ಎಂದರು. ಈ ಮುಂದಿನ ದಿನಗಳಲ್ಲಿ ಸಹ ಇದೇ ರೀತಿಯಲ್ಲಿ ಕಾರ್ಯನಿರ್ವಹಿಸಲು ಸಿಬ್ಬಂದಿಗಳಿಗೆ ತಿಳಿಸಿದರು.
ಎಲ್ಲರು ಸ್ಪಧರ್ಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡೆಯಲ್ಲಿ ಉತ್ತಮ ಪ್ರದರ್ಶನ ನೀಡಬೇಕು ಎಂದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಲಾವಣ್ಯ ಬಿ.ಎನ್ ಅವರು ವಂದಿಸಿದರು.
ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಗಳು, ಗಣ್ಯವ್ಯಕ್ತಿಗಳು ಸೇರಿದಂತೆ ಇತರರು ಇದ್ದರು
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 