ಬಳ್ಳಾರಿ: ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್

ಬಳ್ಳಾರಿ:  ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್

ಬಳ್ಳಾರಿ 11: ಭಾರತ ಚುನಾವಣಾ ಆಯೋಗವು ಲೋಕಸಭೆಯ ಸಾರ್ವತ್ರಿಕ ಚುನಾವಣೆಗಳನ್ನು ಘೋಷಣೆ ಮಾಡಿದ್ದು, ಭಾನುವಾರ ಸಂಜೆಯಿಂದಲೇ ಮಾದರಿ ನೀತಿ ಸಂಹಿತೆ ಜಾರಿಗೆ ಬಂದಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ 1934669 ಮತದಾರರಿದ್ದು, ರಾಜ್ಯದಲ್ಲಿ ನಡೆಯಲಿರುವ ಚುನಾವಣೆಯ 2ನೇ ಹಂತದಲ್ಲಿ ಈ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಮಾ.28ರಂದು ಅಧಿಸೂಚನೆ ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಮನೋಹರ್ ತಿಳಿಸಿದರು. 

ಬಳ್ಳಾರಿ ಲೋಕಸಭಾ ಕ್ಷೇತ್ರವು ಒಟ್ಟು 8 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ವಿಧಾನಸಭಾ ಕ್ಷೇತ್ರವು ಕೊಪ್ಪಳ ಲೋಕಸಭಾ ಕ್ಷೇತ್ರಕ್ಕೆ ಒಳಪಡಲಿದ್ದು, ಅಲ್ಲಿ 101016 ಪುರುಷರು ಮತ್ತು 103034 ಮಹಿಳೆಯರು ಹಾಗೂ 28 ಇತರೆ ಮತದಾರರು ಸೇರಿ 2,04078 ಜನ ಮತದಾರರು ಈ ಕ್ಷೇತ್ರದಲ್ಲಿ ಹೊಂದಿದ್ದಾರೆ. ಇದರ ಮೇಲ್ವಿಚಾರಣೆ ಕೂಡ ನಮ್ಮ ವ್ಯಾಪ್ತಿಗೆ ಬರುತ್ತದೆ ಎಂದು ವಿವರಿಸಿದ ಅವರು, ಬಳ್ಳಾರಿ ಜಿಲ್ಲೆಯ 9 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು ಪುರುಷ 962950, ಮಹಿಳೆ 971459 ಹಾಗೂ ಇತರೆ 260 ಸೇರಿದಂತೆ ಒಟ್ಟು 1934669 ಮತದಾರರಿದ್ದಾರೆ ಎಂದು ಅವರು ವಿವರಿಸಿದರು.

ಲೋಕಸಭಾ ಕ್ಷೇತ್ರದ ಚುನಾವಣೆ ಸುಸೂತ್ರವಾಗಿ ಜರುಗಿಸುವ ನಿಟ್ಟಿನಲ್ಲಿ 2151 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ. ಇದರ ಜತೆಗೆ ಹೆಚ್ಚುವರಿ 10 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದೆ ಎಂಬುದನ್ನು ತಿಳಿಸಿದ ಜಿಲ್ಲಾ ಚುನಾವಣಾಧಿಕಾರಿ ಡಾ.ವಿ.ರಾಮ್ ಪ್ರಸಾತ್ ಅವರು, 3127 ಬ್ಯಾಲೆಟ್ ಯೂನಿಟ್, 2901 ಕಂಟ್ರೋಲ್ ಯೂನಿಟ್, 2901 ವಿವಿಪ್ಯಾಟ್ಗಳು ನಮ್ಮಲ್ಲಿವೆ. ಈಗಾಗಲೇ ಮೊದಲನೇ ಹಂತದ ಪರಿಶೀಲನೆ ಕಾರ್ಯವನ್ನು ರಾಜ್ಯ ಪಕ್ಷಗಳ ಪ್ರತಿನಿಧಿ ಸಮ್ಮುಖದಲ್ಲಿ ನಡೆಸಲಾಗಿದೆ. ಹೆಚ್ಚುವರಿಯಾಗಿ ಸ್ವೀಕೃತಗೊಂಡಿರುವ 200 ವಿವಿ ಪ್ಯಾಟ್ಗಳಿಗೆ ಮಾತ್ರ ಮೊದಲನೇ ಹಂತದ ಪರಿಶೀಲನೆ ಕೈಗೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದರು.

    ಮಾದರಿ ನೀತಿ ಸಂಹಿತೆಯ ಕಟ್ಟುನಿಟ್ಟಿನ ಅನುಷ್ಠಾನ ಮಾಡುವ ನಿಟ್ಟಿನಲ್ಲಿ 51 ಚೆಕ್ಪೋಸ್ಟ್ಗಳನ್ನು ಹಾಕಲಾಗಿದ್ದು, ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. 45 ಎಫ್ಎಸ್ಟಿ, 153 ಎಸ್ಎಸ್ಟಿ ತಂಡಗಳನ್ನು ರಚಿಸಲಾಗಿದೆ ಎಂದು ಹೇಳಿದ ಅವರು, ಚುನಾವಣೆ ಸೂಸುತ್ರವಾಗಿ ಜರುಗಿಸುವ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಗಿದೆ ಎಂದರು.

    ವಿದ್ಯುನ್ಮಾನ ಮತಯಂತ್ರ ಮತ್ತು ವಿವಿ ಪ್ಯಾಟ್ ಮತಯಂತ್ರಗಳನ್ನು ಸಾಗಣೆ ಮಾಡಲು ಕಡ್ಡಾಯವಾಗಿ ಜಿಪಿಎಸ್ ಅಳವಡಿಸಿದ ಅಧಿಕೃತ ವಾಹನಗಳನ್ನು ಬಳಸಲಾಗುತ್ತಿದೆ. ಚುನಾವಣೆಗೆ ಸ್ಪಧರ್ಿಸಬಯಸುವ ಅಭ್ಯರ್ಥಿಗಳು ತಮ್ಮ ಮೇಲಿರುವ ಕ್ರಿಮಿನಲ್ ಮೊಕದ್ದಮೆಗಳು, ಅಭ್ಯಥರ್ಿ ಮತ್ತು ಅವರ ಪತಿ ಅಥವಾ ಪತ್ನಿ ಹೆಸರಿನಲ್ಲಿರುವ ಸ್ಥಿರ ಹಾಗೂ ಚರ ಆಸ್ತಿಗಳ ವಿವರಗಳನ್ನು ನಮೂನೆ 26 ರಲ್ಲಿ ಕಡ್ಡಾಯವಾಗಿ ಪ್ರಮಾಣಪತ್ರದೊಂದಿಗೆ ಸಲ್ಲಿಸಬೇಕು. ಈ ಮಾಹಿತಿಯನ್ನು ಮಾಧ್ಯಮಗಳ ಮೂಲಕವು ಸಾರ್ವಜನಿಕರಿಗೆ ತಿಳಿಸಬೇಕು ಎಂದರು.


ಸುದ್ದಿ ಓದಿ