ಬಳ್ಳಾರಿ: ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸಿ ಟ್ಯಾಕ್ಸಿ ವಿತರಣೆ
ಲೋಕದರ್ಶನ ವರದಿ
ಬಳ್ಳಾರಿ 10: ಮುಂದಿನ ದಿನಗಳಲ್ಲಿ ಬೇಡಿಕೆ ಆಧರಿಸಿ ಪ್ರವಾಸಿ ಟ್ಯಾಕ್ಸಿಗಳ ವಿತರಣೆಗೆ ಹಾಗೂ ಪ್ರವಾಸೋದ್ಯಮ ಪರಿಕರಗಳಿಗೆ ಸಬ್ಸಿಡಿ ವಿತರಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದರು.
ಹಂಪಿ ಉತ್ಸವ ನಿಮಿತ್ತ ಹೊಸಪೇಟೆಯ ತಾಲೂಕು ಕ್ರೀಡಾಂಗಣದಲ್ಲಿ ಸಬ್ಸಿಡಿ ಪ್ರವಾಸಿ ಟ್ಯಾಕ್ಸಿ ವಿತರಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಜನರಿಗೆ ಸ್ವಾವಲಂಬಿಯಾಗಿಸುವ ನಿಟ್ಟಿನಲ್ಲಿ ಪ್ರವಾಸಿ ಟ್ಯಾಕ್ಸಿ ಯೋಜನೆ ನೆರವಾಗಿದೆ. 800ಜನರು ಇದೇ ಜಿಲ್ಲೆಯಲ್ಲಿ ಸೌಲಭ್ಯ ಪಡೆದುಕೊಂಡಿದ್ದಾರೆ ಎಂದು ಹೇಳಿದ ಅವರು ಮುಂದಿನ ದಿನಗಳಲ್ಲಿ ಬೇಡಿಕೆ ಆದರಿಸಿ ಪ್ರವಾಸಿ ಟ್ಯಾಕ್ಸಿ ವಿತರಿಸಲು ಕ್ರಮಕೈಗೊಳ್ಳುವುದರ ಜತೆಗೆ ಪ್ರವಾಸೋದ್ಯಮಕ್ಕೆ ಸಂಬಂಧಿಸಿದ ಪರಿಕರಗಳಿಗೂ ಸಬ್ಸಿಡಿ ವಿತರಿಸಲು ಉದ್ದೇಶಿಸಲಾಗಿದೆ. ಈ ವರ್ಷ ಜಾರಿಗೆ ತರಲಾಗುವುದು ಎಂದರು.
ಜಲಕ್ರೀಡೆಗೆ ಸಂಬಂಧಿಸಿದ ಸಾಮಗ್ರಿಗಳು, ರಾಕ್ ಕ್ಲೈಂಬಿಂಗ್, ಪ್ಯಾರಾಗ್ಲೈಡಿಂಗ್, ಮೊಬೈಲ್ ಕ್ಯಾಂಟಿನ್ ಸಬ್ಸಿಡಿ,ಮೊಬೈಲ್ ಶೌಚಾಲಯ ಪೇ ಆ್ಯಂಡ್ ಯ್ಯೂಸ್ ಸೇರಿದಂತೆ ವಿವಿಧ ಪರಿಕರಗಳಿಗೆ ಸಬ್ಸಿಡಿ ವಿತರಿಸಲಾಗುವುದು ಎಂದರು.
ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ನಿರುದ್ಯೋಗ ಯುವಜನರು ಇದರ ಸೌಲಭ್ಯ ಪಡೆದುಕೊಂಡು ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಿ ಎಂದರು.
ಎಲ್ಲ ಸಾಮ್ರಾಜ್ಯಗಳನ್ನು ಮೀರಿಸಿದ ಸಾಮ್ರಾಜ್ಯ ನಮ್ಮದು ಎಂಬ ಹೆಮ್ಮೆ ವಿಜಯನಗರ ಸಾಮ್ರಾಜ್ಯಕ್ಕಿದ್ದು, ಇದರ ವೈಭವ ತಿಳಿಸಿಕೊಡುವ ಉದ್ದೇಶದಿಂದ ಹಂಪಿ ಉತ್ಸವ ಆಚರಿಸಲಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ ಸಚಿವರು 50ಕ್ಕೂ ಹೆಚ್ಚು ಜನರಿಗೆ ಪ್ರವಾಸಿ ಟ್ಯಾಕ್ಸಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮಂಜುನಾಥ ಹಾಗೂ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಮೋತಿಲಾಲ್ ಲಮಾಣಿ ಮತ್ತಿತರರು ಇದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 