ಬಳ್ಳಾರಿ ನಗರ ಅಭಿವೃದ್ಧಿಯಲ್ಲಿ ರಾಜ್ಯಕ್ಕೆ ಮಾದರಿಯಾಗಲಿದೆ: ಶಾಸಕ ಸೋಮಶೇಖರ ರೆಡ್ಡಿ
ಬಳ್ಳಾರಿ 14: ನಗರದ ಅಭಿವೃದ್ಧಿಗೆ ಇಲ್ಲಿವರೆಗೆ ಕೊಟ್ಯಾಂತರ ರೂ.ವೆಚ್ಚದ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಬರುವ ದಿನಗಳಲ್ಲಿ ಇನ್ನೂ ಅಭಿವೃದ್ಧಿಗೆ ಅನುದಾನ ಹರಿದು ಬರಲಿದೆ. ಬಳ್ಳಾರಿ ನಗರ ಅಭಿವೃದ್ಧಿಯಲ್ಲಿ ರಾಜ್ಯಕ್ಕೆ ಮಾದರಿಯಾಗಲಿದೆ ಎಂದು ಶಾಸಕ ಜಿ. ಸೋಮಶೇಖರ್ ರೆಡ್ಡಿ ಹೇಳಿದರು. ಶಾಸಕರ ಅನುದಾನದಲ್ಲಿ ಸುಮಾರು 10 ಲಕ್ಷ ರೂ. ವೆಚ್ಚದ ಸಮುದಾಯ ಭವನ ನಿಮರ್ಾಣಕ್ಕೆ ಹಾಗೂ ದೇವಾಲಯದ ಬಳಿ 20 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ಅನೇಕ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನಿಡಲಾಗಿದ್ದು, ಬಹುತೇಕ ಕಾಮಗಾರಿಗಳು ಮುಕ್ತಾಯಗೊಂಡಿವೆ. ಇನ್ನೂ ಕೆಲ ಕಾಮಗಾರಿಗಳು ಪ್ರಗತಿಯಲ್ಲಿವೆ. ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಎಲ್ಲ ವಾರ್ಡ್ ಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಈ ಹಿಂದೆ ಇಪ್ಪತ್ತು ದಿನಕ್ಕೊಮ್ಮೆ ನೀರು ಸರಬರಾಜು ಪದ್ಧತಿ ಇತ್ತು. ಆದರೇ, ಎಲ್ಲ ಸಮಸ್ಯೆ ಸರಿಪಡಿಸಿ ವಾರಕ್ಕೊಮ್ಮೆ ಶುದ್ದ ನೀರು ಪೊರೈಕೆ ಮಾಡಲಾಗುತ್ತಿದೆ ಎಂದರು.
ದಿನದ ಇಪತ್ನಾಲ್ಕು ಘಂಟೆ ನೀರಿನ ಸೌಲಭ್ಯ ಕಲ್ಪಿಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಎಲ್ಲ ಕಡೆಗಳಲ್ಲಿ ನಲ್ಲಿ ಜೊಡಿಸುವ ಕೆಲಸ ಪೂರ್ಣಗೊಂಡಿದೆ. ಶೀಘ್ರದಲ್ಲೇ ಈ ಸೌಲಭ್ಯ ನಾಗರಿಕರಿಗೆ ಮುಕ್ತವಾಗಲಿದೆ ಎಂದರು. ಈ ಸಂದರ್ಭದಲ್ಲಿ ಮುಖಂಡರಾದ ಶ್ರಿನಿವಾಸ್ ಮೋತ್ಕರ್, ವೀರಶೇಖರ್ ರೆಡ್ಡಿ, ಕೃಷ್ಣರೆಡ್ಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು.