ಜು.13ರಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಶ್ರೀರಾಮುಲು ಅವರ ಪ್ರವಾಸ
ಬಳ್ಳಾರಿ 12: ಸಾರಿಗೆ,ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಬಳ್ಳಾರಿಯಲ್ಲಿ ಜು.13ರಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜು.13ರಂದು ಮಧ್ಯಾಹ್ನ 2.40ರಂದು ಅವರ ಗೃಹ ಕಚೇರಿಯಿಂದ ರಸ್ತೆ ಮೂಲಕ ಹೊರಟು ಮಧ್ಯಾಹ್ನ 2.50ಕ್ಕೆ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ಕಾಮಗಾರಿಯ ಭೂಮಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3ರಿಂದ ಸಂಜೆ 5.30ರವರೆಗೆ ಜಿಪಂನ ನಜೀರ್ಸಾಬ್ ಸಭಾಂಗಣದಲ್ಲಿ ನಡೆಯಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್ ಸಹಯೋಗದಲ್ಲಿ ಅಮೃತ ಯೋಜನೆಯಡಿಯಲ್ಲಿ ಆಯ್ಕೆಯಾಗಿರುವ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳಿಗೆ ಜೀಜಧನ ಸಹಾಯಧನ ವಿತರಣೆ ಕಾರ್ಯಕ್ರಮ, ಎನ್ಆರ್ಎಲ್ಎಂ ಯೋಜನೆಯಡಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಮೊದಲ ತಂಡವಾಗಿ 27 ಮಹಿಳೆಯರಿಗೆ ಖಠಜ ಐಡಣಜ ತಿಛಿಣಜ ಟಚಿಟಿಚಿರಜಟಜಟಿಣ ನ ನಾಲ್ಕು ಚಕ್ರ ವಾಹನ ಚಲಾವಣೆ ಪರವಾನಿಗೆ ವಿತರಣೆ ಕಾರ್ಯಕ್ರಮ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 100 ಮಹಿಳೆಯರಿಗೆ ಟೈಲರಿಂಗ್ ಯಂತ್ರವನ್ನು ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 06ಕ್ಕೆ ಸಿಂಧವಾಳ ಗ್ರಾಮದಲ್ಲಿ ಬಳ್ಳಾರಿ ತಾಲೂಕು ಸಿಂಧವಾಳ ಗ್ರಾಮದಿಂದ ಮೋಕಾ-ಬಳ್ಳಾರಿ ಮಾರ್ಗವಾಗಿ ಬೆಂಗಳೂರಿಗೆ ನೂತನ ಬಸ್ಗೆ ಚಾಲನೆ ನೀಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.