ಬ್ಯಾಡ್ಗಿ

ವಿದ್ಯಾರ್ಥಿಗಳಿಗೆ ಶುಭ ಕೋರಿದ ಶಾಸಕ ಬಳ್ಳಾರಿ

ವಿದ್ಯಾರ್ಥಿಗಳಿಗೆ ಶುಭ ಕೋರಿದ ಶಾಸಕ ಬಳ್ಳಾರಿ

ಬ್ಯಾಡಗಿ: ಪಟ್ಟಣದ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ಸೋಮವಾರ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳು ಆಗಮಿಸಿದಾಗ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ ಹಾಗೂ ಎಸ್‌’ಡಿಎಂಸಿ ಸದಸ್ಯರು ವಿದ್ಯಾರ್ಥಿಗಳಿಗೆ ಶುಭ ಕೋರಿ, ಯಾವುದೇ ಆತಂಕಪಡದೇ ನಿರ್ಭೀತಿಯಿಂದ ಪರೀಕ್ಷೆಯನ್ನು ಬರೆಯುವಂತೆ ತಿಳಿಸಿದರು.  

ತಾಲೂಕಿನಲ್ಲಿ ನಿನ್ನೆ ನಡೆದ ಮೊದಲ ದಿನದ ಪ್ರಥಮ ಭಾಷೆಯ ಪರೀಕ್ಷೆಯಲ್ಲಿ ಒಬ್ಬ ಪುನರಾವರ್ತಿತ ವಿದ್ಯಾರ್ಥಿ ಸೇರಿದಂತೆ ಒಟ್ಟು 2179 ವಿದ್ಯಾರ್ಥಿಗಳ ಪೈಕಿ 2136 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಬ್ಯಾಡಗಿ ಪಟ್ಟಣದ ಮೂರು ಕೇಂದ್ರಗಳಲ್ಲಿ 13 ಹಾಗೂ ಕಾಗಿನೆಲೆ ಪರೀಕ್ಷಾ ಕೇಂದ್ರದಲ್ಲಿ 30 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 43ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. 

ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸತ್ಯನಾರಾಯಣ, ತಾಲೂಕಿನಾದ್ಯಂತ ಪರೀಕ್ಷೆಯು ಸುಗಮವಾಗಿ ನಡೆಯಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್‌ ಒದಗಿಸಲಾಗಿದೆ. ತಾಲೂಕಿನಲ್ಲಿ 8ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು, ಒಂದು ಪುನರಾವರ್ತಿತ ವಿದ್ಯಾರ್ಥಿ ಸೇರಿದಂತೆ ಒಟ್ಟು 2179 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ತಾಲೂಕಿನ ಎಲ್ಲ ಪರೀಕ್ಷಾ ಕೇಂದ್ರದಲ್ಲಿ ಆರೋಗ್ಯ ಸಹಾಯಕ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಕೆಮ್ಮು, ನೆಗೆಡಿ, ಜ್ವರ ಇದ್ದ ವಿದ್ಯಾರ್ಥಿಗಳಿಗೆ ಪ್ರತ್ಯೇಕ ವ್ಯವಸ್ಥೆ ಮಾಡಲಾಗಿದೆ ಎಂದರು ಪರೀಕ್ಷಾ ಕೇಂದ್ರಗಳಿಗೆ ತಹಶೀಲ್ದಾರ ರವಿಕುಮಾರ ಕೊರವರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಎನ್‌.ತಿಮ್ಮಾರೆಡ್ಡಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಎಫ್‌.ಬಾರ್ಕಿ, ಎಸ್‌.ಎನ್‌.ಮಾತನವರ, ಸುರೇಶ ಉದ್ಯೋಗಣ್ಣನವರ, ಶಿವಬಸಪ್ಪ ಕುಳೆನೂರ, ಸಿಆರಿ​‍್ಪ ಬಸವರಾಜ ಸೋಮಕ್ಕಳವರ ಸೇರಿದಂತೆ ಮತ್ತಿತರ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿ ಶುಭ ಹಾರೈಸಿದರು. 


ಸುದ್ದಿ ಓದಿ