ಬಳ್ಳಾರಿ ಮಹಾನಗರ ಪಾಲಿಕೆ: ಶಿಥಿಲಗೊಂಡ ಕಟ್ಟಡ, ಕಾಂಪೌಂಡ್, ಗೋಡೆ ಕಂಡುಬಂದಲ್ಲಿ ಮಾಹಿತಿ ನೀಡಲು ಮನವಿ
Bellary Municipal Corporation: Request to provide information if any dilapidated building, compound,
ಬಳ್ಳಾರಿ 08: ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 1 ರಿಂದ 39 ರವರೆಗೆ ಬರುವ ಎಲ್ಲಾ ಸರ್ಕಾರಿ ಶಾಲಾ ಕಟ್ಟಡಗಳು, ಸರ್ಕಾರಿ ಕಾಂಪೌಂಡ್‌ಗಳು, ಇತರೆ ಸರ್ಕಾರಿ ಕಟ್ಟಡಗಳು, ಗೋಡೆಗಳು ಅಥವಾ ಯಾವುದೇ ಅಪಾಯಕಾರಿ ಕಟ್ಟಡಗಳು ಶಿಥಿಲಾವಸ್ಥೆಯಲ್ಲಿರುವುದು ಕಂಡುಬಂದಲ್ಲಿ, ಸಾರ್ವಜನಿಕರು ತಕ್ಷಣವೇ ಮಹಾನಗರಪಾಲಿಕೆಗೆ ದೂರವಾಣಿ ಅಥವಾ ವಾಟ್ಸಾಪ್ ಮೂಲಕ ಮಾಹಿತಿ ನೀಡಬಹುದಾಗಿದೆ ಎಂದು ಪಾಲಿಕೆಯ ಉಪ-ಆಯುಕ್ತರು ತಿಳಿಸಿದ್ದಾರೆ.
ಖಾಸಗಿ ಶಾಲೆಗಳು, ಖಾಸಗಿ ಕಟ್ಟಡಗಳು ಹಾಗೂ ಅವುಗಳ ಕಾಂಪೌಂಡ್ ಗೋಡೆಗಳು ಶಿಥಿಲಾವಸ್ಥೆಯಲ್ಲಿದ್ದರೆ ಅಥವಾ ಅಪಾಯಕಾರಿಯಾಗಿದ್ದರೆ, ಅಂತಹ ಕಟ್ಟಡಗಳ ಮಾಲೀಕರು ವಿಷಯವನ್ನು ತಕ್ಷಣವೇ ಮಹಾನಗರಪಾಲಿಕೆಯ ಗಮನಕ್ಕೆ ತರಬೇಕು. ಅಲ್ಲದೆ, ಯಾವುದೇ ಅವಘಡಗಳಿಗೆ ಆಸ್ಪದ ನೀಡದಂತೆ ಸ್ವಂತ ಖರ್ಚಿನಲ್ಲಿಯೇ ಅವುಗಳನ್ನು ತೆರವುಗೊಳಿಸಬೇಕು ಎಂದು ಸೂಚಿಸಿದ್ದಾರೆ. ಅನಧಿಕೃತವಾಗಿ ಕುಂಟೆ, ರಾಜಕಾಲುವೆ ಹಾಗೂ ಚರಂಡಿಗಳ ಮೇಲೆ ವಾಸಿಸುತ್ತಿರುವವರು ತಕ್ಷಣವೇ ಸದರಿ ಜಾಗಗಳನ್ನು ಖಾಲಿ ಮಾಡಬೇಕು. ಮುಂಬರುವ ಮಳೆಗಾಲದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸಿದಲ್ಲಿ ಅದಕ್ಕೆ ಸಾರ್ವಜನಿಕರೇ ನೇರ ಜವಾಬ್ದಾರರಾಗಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 