ಬಳ್ಳಾರಿ ಶ್ರೀ ಕನಕ ದುರ್ಗಮ್ಮ ಸಿಡಿಬಂಡಿ ರಥೋತ್ಸವ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶ
Bellary Sri Kanaka Durgamma Sidibandi Rathotsava banned sale of liquor, orders Deputy Commissioner N
ಬಳ್ಳಾರಿ 23: ಬಳ್ಳಾರಿ ನಗರದ ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವ ಹಿನ್ನಲೆಯಲ್ಲಿ ನಗರದಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಯದಂತೆ ಹಾಗೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21 ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಫೆ.24 ರಂದು ಮಧ್ಯಾಹ್ನ 02 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಗರದ ಶ್ರೀ ಕನಕ ದುರ್ಗಮ್ಮ ದೇವಸ್ಥಾನದ ಸುತ್ತಮುತ್ತಲಿನ 01 ಕಿ.ಮೀ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಸಾಗಣಿಕೆ ಮಾಡದಂತೆ ಮತ್ತು ಮದ್ಯದಂಗಡಿ, ಬಾರ್, ರೆಸ್ಟೋರೆಂಟ್ ಗಳನ್ನು ತೆರೆಯದಂತೆ ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಆದೇಶಿಸಿದ್ದಾರೆ. ಈ ಆದೇಶವು ಡಿಸ್ಟಲರೀಸ್ ರಾಜ್ಯದ ವಿವಿಧ ಕೆ.ಎಸ್.ಬಿ.ಸಿ.ಎಲ್ ಡಿಪೊಗಳಿಗೆ ದಾಸ್ತಾನು ವಿಲೇವಾರಿ ಮಾಡಲು ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ 