‘ಡಿಸಿ, ಎಡಿಸಿ’ಗೆ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ ಪ್ರಧಾನ
ಕಾರವಾರ 25: ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಉತ್ತರಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಡಾ. ಹರೀಶ್ಕುಮಾರ್ ಕೆ., ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಅವರಿಗೆ ಬೆಂಗಳೂರಿನ ಟೌನ್ಹಾಲ್ನಲ್ಲಿ ಸೋಮವಾರ ನಡೆದಕಾರ್ಯಕ್ರಮದಲ್ಲಿ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.
ಮುಖ್ಯಚುನಾವಣಾಧಿಕಾರಿಯವರ ಕಚೇರಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ. ಹರೀಶ್ಕುಮಾರ್ ಕೆ. ಅವರಿಗೆ 2019ನೇ ಸಾಲಿನ ಅತ್ಯುತ್ತಮ ಚುನಾವಣಾಧಿಕಾರಿ ಹಾಗೂ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್.ಕೆ. ಅವರಿಗೆ 2020ನೇ ಸಾಲಿನ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.