ರೂಗಿ ಗ್ರಾಪಂಗೆ ಅತ್ಯುತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ ಪ್ರದಾನ
Best Gram Panchayat Award given to Roogi Village
ರೂಗಿ ಗ್ರಾಪಂಗೆ ಅತ್ಯುತ್ತಮ ಗ್ರಾಮ ಪಂಚಾಯಿತಿ ಪ್ರಶಸ್ತಿ ಪ್ರದಾನ
ಇಂಡಿ 05: ತಾಲೂಕಿನ ರೂಗಿ ಗ್ರಾಮ ಪಂಚಾಯತಿಗೆ ಸನ್ 2023-24ನೇ ಸಾಲಿನ ನರೇಗಾ ಯೋಜನೆಯ ’ರಾಜ್ಯ ಮಟ್ಟದ ಅತ್ಯುತ್ತಮ ಗ್ರಾಮ ಪಂಚಾಯತಿ ಪ್ರಶಸ್ತಿ’ ದೊರಕಿದೆ. ಸನ್ 2023-24ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಅತ್ಯುತ್ತಮ ಕಾಮಗಾರಿಗಳನ್ನು ಅನುಷ್ಠಾನ ಮಾಡಿದ ಫಲವಾಗಿ ರಾಜ್ಯ ಮಟ್ಟದ ಪ್ರಶಸ್ತಿ ಲಭಿಸಿದ್ದು, ದಿ.5ರಂದು ಬೆಂಗಳೂರಿನ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜರುಗಿದ ನರೇಗಾ ಹಬ್ಬ-2025 ಕಾರ್ಯಕ್ರಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ಅವರು ಪ್ರಶಸ್ತಿ ಪ್ರದಾನ ಮಾಡಿದರು.ಗ್ರಾಪಂ ಅಧ್ಯಕ್ಷ ಸೊಮವ್ವ ಯಶವಂತ ಹೊಸಮನಿ, ತಾಪಂ ಸಹಾಯಕ ನಿರ್ದೇಶಕರಾದ ಸಂಜಯ ಖಡಗೇಖರ, ಗ್ರಾಪಂ ಪಿಡಿಒ ಬಸವರಾಜ ಬಬಲಾದ, ಟಿಐಇಸಿ ರಾಮನಗೌಡ ಸರಬಡಗಿ, ತಾಂತ್ರಿಕ ಸಹಾಯಕರಾದ ಈರಣ್ಣ ಇಂಡಿ ಸೇರಿದಂತೆ ಇತರರು ಹಾಜರಿದ್ದರು.
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಜೋಡಿ ಕೊಲೆ : ಗ್ರಾಮದಲ್ಲಿ ತ್ವೇಷಮಯ ವಾತಾವರಣ
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ 