ಬೆಸ್ಟ್ ಪಿಯು ಸೈನ್ಸ್ ಕಾಲೇಜು ಮಿಣಜಗಿ ಕ್ರಾಸ್, ತಾಳಿಕೋಟಿ ಬೆಸ್ಟ್ ಟ್ಯಾಲೆಂಟ್ ಏಕ್ಸಾಮ್-2026 ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ
Best PU Science College Minajagi Cross, Talikoti Students' Performance in Best Talent Exam-2026
ಬೆಸ್ಟ್ ಪಿಯು ಸೈನ್ಸ್ ಕಾಲೇಜು ಮಿಣಜಗಿ ಕ್ರಾಸ್, ತಾಳಿಕೋಟಿ
ಬೆಸ್ಟ್ ಟ್ಯಾಲೆಂಟ್ ಏಕ್ಸಾಮ್-2026 ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಾಧನೆ
ತಾಳಿಕೋಟಿ 25: ಪಟ್ಟಣದ ಶ್ರೀ ಘನಮಠೇಶ್ವರ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ನಡೆಯುತ್ತಿರುವ ಬೆಸ್ಟ್ ಪಿಯು ಸೈನ್ಸ್ ಕಾಲೇಜ್ ಮಿಣಜಗಿ ಕ್ರಾಸ್ ಹಾಗೂ ಭವಿತಾ ನೀಟ್ ಅಕಾಡೆಮಿ ಬೆಂಗಳೂರು ಇವರ ಸಹಯೋಗದಲ್ಲಿ ದಿನಾಂಕ :25-01-2025 ರಂದು ಬೆಸ್ಟ ಟ್ಯಾಲೆಂಟ್ ಏಕ್ಸಾಂ ನ್ನು ಏರಿ್ಡಸಲಾಗಿತ್ತು. ಪರೀಕ್ಷೆಯಲ್ಲಿ ಮೊದಲ 5 ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ತಲಾ 2500 ರೂಗಳ ನಗದು ಬಹುಮಾನವನ್ನು ನೀಡಿ ಸನ್ಮಾನಿಸಲಾಯಿತು. ಈ ಟ್ಯಾಲೆಂಟ್ ಏಕ್ಸಾಮ್ ಪರೀಕ್ಷೆಯಲ್ಲಿ ಅನೇಕ ಶಾಲೆಗಳ 616 ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.
ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿ ಕುಮಾರ ಶ್ರೀಧರ ಜಿ ಪಿ ಹಿರೇಮಠ , ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ಕುಮಾರಿ ಹರ್ಷಿತಾ , ತೃತೀಯ ಸ್ಥಾನ ಪಡೆದ ವಿದ್ಯಾರ್ಥಿನಿ ಕುಮಾರಿ ಶ್ರೇಯಾ ಪಾಟೀಲ, ನಾಲ್ಕನೇ ಸ್ಥಾನ ಪಡೆದ ವಿದ್ಯಾರ್ಥಿ ಕುಮಾರ ಮಲ್ಲನಗೌಡ ಸಿದ್ದರೆಡ್ಡಿ, ಐದನೇ ಸ್ಥಾನ ಪಡೆದ ವಿದ್ಯಾರ್ಥಿ ಕುಮಾರ ನಿಂಗನಗೌಡ ಸಿದ್ದರೆಡ್ಡಿ, ಈ ಎಲ್ಲಾ ವಿದ್ಯಾರ್ಥಿಗಳಿಗೆ ನಗದು ಬಹುಮಾನ ವಿತರಣೆ ಮಾಡಿ ಜೊತೆಗೆ ಉಚಿತ ಪ್ರವೇಶವನ್ನು ನೀಡುವುದಾಗಿ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಎಸ್ ಎಮ್ ಸಜ್ಜನ ಅವರು ತಿಳಿಸಿದರು. ಈ ಬಹುಮಾನವು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರ ಜೊತೆಗೆ ಮುಂದಿನ ವಿದ್ಯಾಭ್ಯಾಸದಲ್ಲಿ ಇನ್ನಷ್ಟು ಸಾಧನೆ ಮಾಡಲು ಪ್ರೇರಣೆಯಾಗಿ ಪರಿಣಮಿಸಲಿದೆ ಎಂದರು. ಮುಂದಿನ ದಿನಗಳಲ್ಲಿ ಕೂಡ ಈ ರೀತಿಯ ಶೈಕ್ಷಣಿಕ ಕಾರ್ಯಕ್ರಮಗಳನ್ನು ಆಯೋಜಿಸಿ, ವಿದ್ಯಾರ್ಥಿಗಳ ಶ್ರೇಷ್ಠತೆಯನ್ನು ಗುರುತಿಸುವ ಮತ್ತು ಉತ್ತೇಜಿಸುವ ಕಾರ್ಯವನ್ನು ಮುಂದುವರಿಸುವ ಆಶಯವನ್ನು ಸಂಸ್ಥೆ ವ್ಯಕ್ತಪಡಿಸಿದೆ.
ಈ ಸಂದರ್ಭದಲ್ಲಿ ಭವಿತಾ ನೀಟ್ ಅಕಾಡೆಮಿಯ ಸಂಸ್ಥಾಪಕರಾದ ಶ್ರೀ ದತ್ತಾತ್ರೇಯ ಸರ್, , ನಿರ್ದೇಶಕರಾದ ಪುರುಷೋತ್ತಮ್ ಸರ್, ಬೆಸ್ಟ್ ಪಿಯು ಸೈನ್ಸ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಮಾರೆಣ್ಣ ಶ್ರೀ ಘನಮಠೇಶ್ವರ ಆಂಗ್ಲ ಮಾಧ್ಯಮದ ಪ್ರಾಂಶುಪಾಲರಾದ ಶ್ರೀ ಬಸವರಾಜ ಸಜ್ಜನ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಕರಾದ ಶ್ರೀ ಮಂಜುನಾಥ ಸರ್ ಅವರು ನಿರೂಪಣೆ ಮಾಡಿದರು.
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ 