ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ
ರಾಣಿಬೆನ್ನೂರ 8: ತಾಲೂಕಿನ ಮಾಕನೂರ ಗ್ರಾಮದ ಮಾರ್ಕಂಡೇಶ್ವರ ಸರ್ಕಾರಿ ಪೌಢ ಶಾಲೆಯ ವಿಜ್ಞಾನ ಶಿಕ್ಷಕ ನಾಗರಾಜ ಎಚ್ ಮತ್ತೂರ, ಮಾಕನೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ವಿಜಯ ವಿಷ್ಣಪ್ಪ ಬಂಗಾರಿ ಮತ್ತು ದೇವರಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಸಾವಿತ್ರಿ ಎಚ್.ಬಿ ಇವರು ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರಿಗೆ ಸ. 5ರಂದು ಹಾವೇರಿ ಗುರುಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಉತ್ತಮ ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಶಾಮಸುಂದರ ಅಡಿಗ ತಿಳಿಸಿದ್ದಾರೆ.