ಯರಗಟ್ಟಿ

ಡಾ. ಬಾಳಪ್ಪ ಈರಪ್ಪ ಚಿನಗುಡಿಗೆ ಶ್ರೇಷ್ಠ ಶಿಕ್ಷಕ ಪ್ರಶಸ್ತಿ

ಡಾ. ಬಾಳಪ್ಪ ಈರಪ್ಪ ಚಿನಗುಡಿಗೆ ಶ್ರೇಷ್ಠ ಶಿಕ್ಷಕ ಪ್ರಶಸ್ತಿ

ಯರಗಟ್ಟಿ 05: ಸವದತ್ತಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಸಮೂಹ ಸಂಪನ್ಮೂಲ ಕಾರ್ಯಾಲಯದಲ್ಲಿ ಸಂಪನ್ಮೂಲ ಶಿಕ್ಷಕರಾಗಿರುವ ಡಾ. ಬಾಳಪ್ಪ ಈರಪ್ಪ ಚಿನಗುಡಿ ಇವರು ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ಶ್ರೇಷ್ಠ ಶಿಕ್ಷಕ ಸಾಹಿತ್ಯ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಚಿನಗುಡಿಯವರ ಕ್ರೀಯಾಶೀಲತೆಗೆ ಯರಗಟ್ಟಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ತಮ್ಮಣ್ಣ ಕಾಮಣ್ಣವರ ಸೇರಿದಂತೆ ಎಲ್ಲ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿ, ಅಭಿನಂದನೆ ತಿಳಿಸಿದ್ದಾರೆ. 


ಸುದ್ದಿ ಓದಿ