ಬೆಳಗಾವಿ

ಬೆಟಗೇರಿ: ವಿವಿಧ ಸ್ಪರ್ಧೆಗಳಲ್ಲಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಬೆಟಗೇರಿ: ವಿವಿಧ ಸ್ಪರ್ಧೆಗಳಲ್ಲಿ ವಿವಿಡಿ ಸರ್ಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿಗಳ ಸಾಧನೆ

ಲೋಕದರ್ಶನ ವರದಿ 

          ಬೆಟಗೇರಿ 07 : ಚಿಕ್ಕೋಡಿ ಶೈಕ್ಷಣಿಕ ಜಿಲ್ಲಾ ಶಿಕ್ಷಣ ಇಲಾಖೆ ಮತ್ತು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾಯಾಲಯದ ಸಹಯೋಗದಲ್ಲಿ  ತಪಸಿ ಗ್ರಾಮದ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಯಲ್ಲಿ ನ.6ರಂದು ನಡೆದ ಪ್ರಸಕ್ತ ಸಾಲಿನ ಪ್ರೌಢ ಶಾಲಾ ವಿಭಾಗದ ಬೆಟಗೇರಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಗೋಕಾಕ ತಾಲೂಕಿನ ಬೆಟಗೇರಿ ವಿವಿಡಿ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ.  

    ಶಾಲೆಯ ಅಲಿನಾಮಿರ್ಜಾನಾಯ್ಕ ಹಿಂದಿ ಭಾಷಣ ಸ್ಪಧೆಯಲ್ಲಿ ಪ್ರಥಮ, ಕೀರ್ತಿ ಸೊಪ್ಪಡ್ಲ ಭರತನಾಟ್ಯ ಸ್ಪರ್ಧೆಯಲ್ಲಿ ಪ್ರಥಮ, ಕಾವೇರಿ ಕನೋಜಿ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ, ಶ್ರರ್ದಆ ನೀಲಣ್ಣವರ ಮತ್ತು ಸ್ವಾತಿ ಪಾಟೀಲ ಕ್ವಿಜ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸೇವಂತಾ ಚಂದರಗಿ ರಂಗೋಲಿ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಮಂಜುನಾಥ ಬಾಣಸಿ ಚರ್ಚಾಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ, ಶ್ರೇಯಾ ಹಾವಾಡಿ ಕವನ ವಾಚನ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ.  

            ಬೆಟಗೇರಿ ಸಿಆರ್‌ಪಿ ಎಂ.ಬಿ.ನಾಯ್ಕರ, ಶಿಕ್ಷಕ ಪ್ರಕಾಶ ಕುರಬೇಟ, ಅಶೋಕ ಕುಂದರಗಿ, ಶುಭಾ.ಬಿ., ಗಣಪತಿ ಭಾಗೋಜಿ, ಭಾಗ್ಯಶ್ರೀ ನಾಯಕ, ದೀಪಾ ದಾಸಂಗಳಿ, ನಾಗರಾಜ ಅರಳಿಮಟ್ಟಿ, ಮಲ್ಹಾರಿ ಪೋಳ ಸೇರಿದಂತೆ ವಿವಿಧ ಶಾಲೆಗಳ ಮುಖ್ಯೋಪಾಧ್ಯಯರು, ಶಿಕ್ಷಕರು, ಅತಿಥಿ ಶಿಕ್ಷಕರು, ಶಿಕ್ಷಣಪ್ರೇಮಿಗಳು, ಮತ್ತೀತರರು ಇದ್ದರು.     

         ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ: ಸ್ಥಳೀಯ ವಿವಿಡಿ ಸರಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಯ ರಮೇಶ ಅಳಗುಂಡಿ, ಶಿಕ್ಷಕರು, ಅತಿಥಿ ಶಿಕ್ಷಕರು, ಎಸ್‌ಡಿಎಮ್‌ಸಿ ಅಧ್ಯಕ್ಷ ರಾಮಣ್ಣ ನೀಲಣ್ಣವರ ಮತ್ತು ಸದಸ್ಯರು, ಶಿಕ್ಷಣಪ್ರೇಮಿಗಳು, ಸ್ಥಳೀಯರು ಶಾಲೆಯ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 


ಸುದ್ದಿ ಓದಿ