ಬೆಟಗೇರಿ ಮಡ್ದಿ ವೀರಸಿದ್ದೇಶ್ವರ ಜಾತ್ರೆ ಸೆ.11ರಿಂದ
Betageri Maddi Veerasiddeshwara Jatra from September 11
ಲೋಕದರ್ಶನ ವರದಿ
ಬೆಟಗೇರಿ 06: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಮಡ್ದಿ ವೀರಸಿದ್ದೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಸೆ.11ರಿಂದ 12ರವರೆಗೆ ನಡೆಯಲಿವೆ.
ಸೆ.11ರಂದು ಬೆಳಗ್ಗೆ 6 ಗಂಟೆಗೆ ದೇವರ ಗದ್ದುಗೆಗೆ ಪೂಜೆ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಸಂಜೆ 6 ಗಂಟೆಗೆ ಪುರದೇವರ ಪಲ್ಲಕ್ಕಿಗಳನ್ನು ಬರಮಾಡಿಕೊಳ್ಳಲಾಗುವುದು.
ರಾತ್ರಿ 9 ಗಂಟೆಗೆ ರಾಮದುರ್ಗ ತಾಲೂಕಿನ ಚುಂಚುನೂರಿನ ಮಾಯಮ್ಮದೇವಿ ಡೊಳ್ಳಿನ ಗಾಯನ ಸಂಘ ಹಾಗೂ ಹುಕ್ಕೇರಿ ತಾಲೂಕಿನ ಡೊಳ್ಳಿ ಗಾಯನ ಸಂಘಗಳಿಂದ ಡೊಳ್ಳಿನ ಪದಗಳ ಗಾಯನ ನಡೆಯಲಿದೆ.
ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜಾತ್ರಾ ಮಹೋತ್ಸವ ಉದ್ಘಾಟಿಸಲಿದ್ದಾರೆ. ವಿವಿಧ ಮಠಾಧೀಶರು, ಗಣ್ಯರು, ರಾಜಕೀಯ ಮುಖಂಡರು, ಸಂತ-ಶರಣರು ಹಾಗೂ ಸ್ಥಳೀಯ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸೆ.12ರಂದು ಬೆಳಗ್ಗೆ 8 ಗಂಟೆಗೆ ಶ್ರೀ ವೀರಸಿದ್ದೇಶ್ವರ ದೇವರ ಗದ್ದುಗೆಗೆ ಅಭಿಷೇಕ, ಮಹಾಪೂಜೆ ಬಳಿಕ ಪಲ್ಲಕ್ಕಿ ಉತ್ಸವ, ಜಾತ್ರಾ ಮಹೋತ್ಸವ, ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಹಾಗೂ ಮಹಾಪ್ರಸಾದ ನಡೆಯಲಿವೆ. ಸಂಜೆ 6 ಗಂಟೆಗೆ ಭಂಡಾರ ಒಡೆಯುವ ಕಾರ್ಯಕ್ರಮದೊಂದಿಗೆ ಜಾತ್ರಾ ಮಹೋತ್ಸವ ಸಂಪನ್ನಗೊಳ್ಳಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 