ಭದ್ರಾ ನದಿಗೆ ನೀರು: ನದಿಪಾತ್ರದಲ್ಲಿ ಸಾರ್ವಜನಿಕರ ಓಡಾಟ ನಿಷೇಧ
ಬಳ್ಳಾರಿ 27: ಭದ್ರಾ ಜಲಾಶಯದ ಹೆಚ್ಚುವರಿ ನೀರನ್ನು ನದಿಗೆ ಬಿಡಲಾಗುತ್ತಿದ್ದು, ನದಿಯ ಎಡ ಮತ್ತು ಬಲದಂಡೆಯ ಉದ್ದಕ್ಕೂ ತಗ್ಗು ಪ್ರದೇಶದಲ್ಲಿ ವಾಸಿಸುವ ಜನರು ಮುಂಜಾಗ್ರತೆಯಾಗಿ ಸುರಕ್ಷತಾ ಸ್ಥಳಗಳಿಗೆ ತೆರಳುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಕ.ನೀ.ನಿ.ನಿ. ಭದ್ರಾ ಯೋಜನಾ ವೃತ್ತದ ಅಧೀಕ್ಷಕ ಅಭಿಯಂತರರಾದ ಎಂ.ಚಂದ್ರಹಾಸ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಲಾನಯನ ಪ್ರದೇಶದಲ್ಲಿ ಸತತವಾಗಿ ಮಳೆ ಬೀಳುತ್ತಿದ್ದು, ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣ ಕ್ರಮೇಣ ಹೆಚ್ಚಾಗುತ್ತಿದೆ. ಜು.26ರಂದು ಜಲಾಶಯದ ನೀರಿನ ಮಟ್ಟ 180 ಗಿಂತ ಹೆಚ್ಚಾಗಿದ್ದು, ಪ್ರಸ್ತುತ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ 18 ರಿಂದ 20 ಸಾವಿರ ಕ್ಯೂಸೆಕ್ಸ್ ಇದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಂಭವವಿದೆ. ನೀರಿನ ಒಳಹರಿವು ಇದೇ ರೀತಿ ಮುಂದುವರೆದಲ್ಲಿ ಭದ್ರಾ ಜಲಾಶಯವು ಅತೀ ಶೀಘ್ರದಲ್ಲಿ ಭರ್ತಿಯಾಗುವ ಸಂಭವವಿದೆ. ಅಣೆಕಟ್ಟು ಸುರಕ್ಷತೆಯ ಹಿತದೃಷ್ಟಿಯಿಂದ ಹೆಚ್ಚುವರಿ ನೀರನ್ನು ಯಾವ ಸಮಯದಲ್ಲಾದರೂ ಒಳಹರಿವಿನ ಪ್ರಮಾಣಕ್ಕೆ ಅನುಗುಣವಾಗಿ ಸ್ಪಿಲ್ ವೇ ಗೇಟ್ (ಠಿಟಟ ತಿಚಿಥಿ ರಚಿಣಜ) ಮೂಲಕ ನದಿಗೆ ಬಿಡಲಾಗುವುದು. ಆದುದರಿಂದ ನದಿಪಾತ್ರದಲ್ಲಿ ಸಾರ್ವಜನಿಕರು ತಿರುಗಾಡುವುದು, ಜಾನುವಾರುಗಳನ್ನು ನದಿಪಾತ್ರದಲ್ಲಿ ಮೇಯಿಸುವುದನ್ನು ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.