ಭಗೀರಥ ಮಹರ್ಷಿ ಜಯಂತಿ ಸರಳ ಆಚರಣೆ
ಬೆಂಗಳೂರು, ಏಪ್ರಿಲ್ 30,ಕೋವಿಡ್-19/ ಕೊರೋನಾ ವೈರಾಣು ಸೋಂಕು ತಡೆಯಲು ಲಾಕ್ ಡೌನ್ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ "ಶ್ರೀ ಭಗೀರಥ ಮಹರ್ಷಿ ಜಯಂತಿ"ಯನ್ನು ದೇವನಹಳ್ಳಿ ತಾಲ್ಲೂಕು ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿಂದು ಸರಳವಾಗಿ ಆಚರಿಸಲಾಯಿತು. "ಶ್ರೀ ಭಗೀರಥರ" ಭಾವಚಿತ್ರಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಅಪರ ಜಿಲ್ಲಾಧಿಕಾರಿ ಡಾ. ಜಗದೀಶ್.ಕೆ.ನಾಯಕ್ ಅವರು ಪುಷ್ಪಾರ್ಚನೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಿದರು. ಜಿಲ್ಲಾಧಿಕಾರಿ ಕಚೇರಿ ವ್ಯವಸ್ಥಾಪಕ ವಿಜಯಕಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಆರಾಧ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಧಿಕಾರಿಯವರ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ
ಕಣಗಲಾ ಬಳಿ ಲಾರಿ, ದ್ವಿಚಕ್ರವಾಹನ ನಡುವೆ ಅಪಘಾತ : ಇಬ್ಬರ ಸಾವು
ಗಾಂಜಾ ಮಾರಾಟಗಾರರ ಮೇಲೆ ದಾಳಿ; 9,21 ಲಕ್ಷದ ವಸ್ತುಗಳ ವಶ, ಐವರ ಬಂಧನ
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ 