ಭಾರತರತ್ನ ಡಾ. ಬಿ.ಆರ್ ಅಂಬೇಡ್ಕರ್ ಓದು ಕಾರ್ಯಕ್ರಮ
ಧಾರವಾಡ 14: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಧಾರವಾಡ ಹಾಗೂ ಹಿರೇಮಲ್ಲೂರ ಈಶ್ವರನ್ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಅಕ್ಟೋಬರ್ 13 ರಂದು ಧಾರವಾಡದ ಹಿರೇಮಲ್ಲೂರ ಈಶ್ವರನ್ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಭಾರತರತ್ನ “ಡಾ. ಬಿ.ಆರ್ ಅಂಬೇಡ್ಕರ್ ಓದು” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಹಿರೇಮಲ್ಲೂರ ಈಶ್ವರನ್ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯರರಾದ ಶಶಿಧರ ತೋಡಕರ ಅವರು ಕಾರ್ಯಕ್ರಮ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದರು. ಹಿರಿಯ ನ್ಯಾಯವಾದಿಗಳು ಹಾಗೂ ಸಾಹಿತಿಗಳಾದ ಡಾ. ಲೋಹಿತ್ ಡಿ. ನಾಯ್ಕರ ಅವರು ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಪಾತ್ರದ ಕುರಿತು ವಿಶೇಷ ಉಪನ್ಯಾಸ ನೀಡಿದರು. ಹುಬ್ಬಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನ ರಾಜ್ಯಶಾಸ್ತ್ರ ವಿಭಾಗ ಸಹ ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರಾದ ಡಾ. ಬಸವರಾಜೇಶ್ವರಿ ಆರ್. ಪಾಟೀಲ ಅವರು ಅತಿಥಿಗಳಾಗಿ ಭಾಗವಹಿಸಿ ಭಾರತದ ಸಂವಿಧಾನದ ಕುರಿತು ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರೇಮಲ್ಲೂರ ಈಶ್ವರನ್ ಪದವಿಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.