ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಭಾರತೀಯ ಜನತಾ ಪಾರ್ಟಿ ವಿಜಯಭೇರಿ
ಬಳ್ಳಾರಿ 10: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶವು ದಿ. 10ರಂದು ಹೊರಬಿದ್ದಿದ್ದು, ಇದರಲ್ಲಿ 4ರಾಜ್ಯಗಳಲ್ಲಿ ಭಾರತೀಯ ಜನತಾ ಪಾರ್ಟಿ ವಿಜಯಭೇರಿ ಭಾರಿಸಿದ ಸಂದರ್ಭದಲ್ಲಿ ಬಿಜೆಪಿ ಬಳ್ಳಾರಿ ಜಿಲ್ಲೆಯ ಕಾರ್ಯಕರ್ತರು ಮತ್ತು ಮುಖಂಡರು ಬಳ್ಳಾರಿ ನಗರ ಎಸ್.ಪಿ ವೃತ್ತದ ಕಛೇರಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮಾಚರಣೆ ನೆರವೇರಿಸಿ ಸಿಹಿ ತಿನ್ನಿಸಿ, ಪಟಾಕಿ ಸಿಡಿಸಿ ತಮಟೆಯೊಂದಿಗೆ ವಿಜಯೋತ್ಸವ ಆಚರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಬಳ್ಳಾರಿ ಜಿಲ್ಲಾಧ್ಯಕ್ಷ ಗೋನಾಳು ಮುರಹರಗೌಡ, ರಾಜ್ಯ ರೈತ ಮೋರ್ಚ ಪ್ರಧಾನ ಕಾರ್ಯದರ್ಶಿ ಗುರುಲಿಂಗನಗೌಡ, ಹಿರಿಯ ಮುಖಂಡರಾದ ರಾಮಲಿಂಗಪ್ಪ, ರಾಜ್ಯ ಉಪಾದ್ಯಕ್ಷರಾದ ಶಿವಕೃಷ್ಣಮ್ಮ, ನಗರ ಅಧ್ಯಕ್ಷರು ಕೆ.ಬಿ.ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ರಾಮಾಂಜಿನಿ, ಜಿಲ್ಲಾ ಮದ್ಯಮ ಸಹ ಪ್ರಮುಖ್ ರಾಜೀವ್ ತೊಗರಿ, ರಾಮಕ್ರಿಷ್ಣ, ಕಾರ್ಯಾಲಯ ಕಾರ್ಯದರ್ಶಿ, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.