ಪೊಲೀಸ್ ಠಾಣೆ ಸ್ವಚ್ಛವಾಗಿಲ್ಲದಿದ್ದರೇ, ಅಮಾನತು: ಭಾಸ್ಕರ್ ರಾವ್ ಎಚ್ಚರಿಕೆ
ಬೆಂಗಳೂರು, ಸೆ 10 ನಗರದ ಎಲ್ಲಾ ಪೊಲೀಸ್ ಠಾಣೆಗಳು ಸ್ವಚ್ಛವಾಗಿಲ್ಲದಿದ್ದರೇ, ಸಂಬಂಧಿಸಿದ ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ, ಅಮಾನತುಗೊಳಿಸುವುದಾಗಿ ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಪೊಲೀಸರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಸೋಮವಾರ ವೈಯಕ್ತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಆಯುಕ್ತರು ಬನಂಕರಿ ಠಾಣೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಠಾಣೆಯ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಪಿಎಸ್ಐ ಹಾಗೂ ಹೆಡ್ ಕಾನ್ಸ್ ಟೇಬಲ್ ಯಾರೂ ಕೂಡ ಕರ್ತವ್ಯದಲ್ಲಿ ಹಾಜರಿರಲಿಲ್ಲ. ಅಲ್ಲದೇ, ಶೌಚಾಲಯ ಹಾಗೂ ಠಾಣೆಯ ಎದುರಿಗಿನ ಅಸ್ವಚ್ಛತೆ ಕಂಡು ಸಿಬ್ಬಂದಿ ವಿರುದ್ಧ ಆಯುಕ್ತರು ಆಕ್ರೋಶಗೊಂಡಿದ್ದಾರೆ.
ಇನ್ನು 15 ದಿನಗಳಲ್ಲಿ ಠಾಣೆ ಸ್ವಚ್ಛವಾಗಿರಬೇಕು ಎಂದು ಬನಶಂಕರಿ ಪೊಲೀಸರಿಗೆ ಖಡಕ್ ಸೂಚನೆ ನೀಡಿದ ಅವರು, ವಾಕಿಟಾಕಿ ಮೂಲಕ ನಗರದ ಎಲ್ಲಾ ಠಾಣೆಗಳು ಸ್ವಚ್ಛವಾಗಿರಬೇಕು. ಯಾವುದೇ ಕ್ಷಣದಲ್ಲಾದರೂ ತಾವು ಠಾಣೆಗೆ ಭೇಟಿ ನೀಡಬಹುದು. ಠಾಣೆಗಳು ಸ್ವಚ್ಛವಾಗಿಲ್ಲದಿದ್ದರೇ ಅಧಿಕಾರಿಗಳನ್ನೇ ಹೊಣೆ ಮಾಡಿ ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ
ಕಂಟ್ರಿ ಬಂದೂಕು ತಯಾರಿಸುತ್ತಿದ್ದ ಖದೀಮರ ಬಂಧನ : 9 ಪಿಸ್ತೂಲ್ ವಶ: 13 ಜನ ಬಂಧನ
ಹಳೆದಿಗ್ಗೆವಾಡಿ ಗ್ರಾಮದ ಮಹಾದೇವ ಗಂಗಾಯಿ ಅಜ್ಜ ವಿಧಿವಶ
ಆರೈಕೆಗಿದ್ದವನಿಂದ 1.02 ಕೋಟಿಯ 930 ಗ್ರಾಂ ಚಿನ್ನ ಕಳ್ಳತನ: ಇಬ್ಬರ ಬಂಧನ, 73.03 ಲಕ್ಷದ ಚಿನ್ನ ವಶಕ್ಕೆ 