ಸಂವಿಧಾನ ದಿನಾಚರಣೆ ಅಂಗವಾಗಿ ಸಸಿ ನೆಟ್ಟ ಭೀಮಾಶಂಕರ ಕನ್ನೂರ
Bhimashankar Kannur plants saplings as part of Constitution Day celebrations
ಇಂಡಿ 27: ತಾಲೂಕಿನ ಬಸನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಕ್ಯಾತನಕೇರಿ ಗ್ರಾಮದಲ್ಲಿ ಬರುವ ಅಮೃತ ಸರೋವರ ದಡದ ಮೇಲೆ ಸಂವಿಧಾನ ದಿನಾಚರಣೆ ಅಂಗವಾಗಿ ಇಂಡಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಭೀಮಾಶಂಕರ ಕನ್ನೂರ ಅವರು ಗ್ರಾಮ ಪಂಚಾಯಿತಿಯ ಅಧ್ಯಕ್ಷರು ಜೊತೆಗುಡಿ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಭಾರತ ಸಂವಿಧಾನ ಪೀಠಿಕೆಗೆ ಪೂಜೆ ಸಲ್ಲಿಸಿ ಹೂ-ಪುಷ್ಪ ಸಮರ್ಿಸಿದರು. ವ
ಬಳಿಕ ಮಾತನಾಡಿ ಅವರು ಭಾರತ ಸಂವಿಧಾನದಲ್ಲಿ ಉಲ್ಲೇಖಿಸಿರುವ ಮೂಲಭೂತ ಕರ್ತವ್ಯಗಳು, ಹಕ್ಕುಗಳು ಮತ್ತು ಮೌಲ್ಯಗಳ ಕುರಿತು ಹಾಗೂ ನೀರಿನ ಸಂರಕ್ಷಣೆ, ಸ್ವಚ್ಛತೆಯ ಕುರಿತು ಸಂಕ್ಷಿಪ್ತ ಮಾಹಿತಿ ನೀಡಿದರು. ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು ಮಲ್ಲಿಕಾರ್ಜುನ ನಿಲಂಗಿ ರವರು ಸಂವಿಧಾನ ಪೀಠಿಕೆ ಯನ್ನು ಓದಿಸಿದರು. ಸಂವಿಧಾನ ದಿನಾಚರಣೆ ಪ್ರಯುಕ್ತ ಅಮೃತ ಸರೋವರ ದಂಡೆಯಲ್ಲಿ ವಿವಿಧ ಬಗೆಯ 15 ಸಸಿಗಳನ್ನು ನೆಡಲಾಯಿತು.ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರುಗಳು, ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಖಿಂಇ ಸ್ಥಳೀಯ ಜನಪ್ರತಿನಿಧಿಗಳು, ಯುವಕರು, ಶಾಲಾ ವಿದ್ಯಾರ್ಥಿಗಳು, ನರೇಗಾ ಕೂಲಿಕಾರ್ಮಿಕರು ಸೇರಿದಂತೆ ಸಾರ್ವಜನಿಕರು ಹಾಗೂ ಗ್ರಾಮ ಪಂಚಾಯಿತಿ ಎಲ್ಲಾ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಪುನರ್ ಅಭಿವೃದ್ಧಿಗೊಂಡ ಚೆನ್ನೈ ಪಾರ್ಕ್ ಅಮೃತ್ ರೈಲು ನಿಲ್ದಾಣವನ್ನು ಜುಲೈ 17ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಅನಾಮಧೇಯ ಶವ ಪತ್ತೆ: ಮಹಿಳೆ ಕೊಲೆ ಪ್ರಕರಣ ಭೇದಿಸಿದ ಸಂಕೇಶ್ವರ ಪೊಲೀಸರು : ಆರೋಪಿ ಬಂಧನ
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ 