ರಾಜೀವ್ ಗಾಂಧಿ ನಗರದಲ್ಲಿ ಮೂಲಸೌಕರ್ಯ ಕಾಮಗಾರಿಗೆ ಚಾಲನೆಕುಡಿಯುವ ನೀರು, ಒಳಚರಂಡಿ ಹಾಗೂ ಪೇವರ್ಸ್ ಅಳವಡಿಕೆಗೆ ಭೂಮಿ ಪೂಜೆ
Bhoomi Puja to kick off infrastructure work in Rajiv Gandhi Nagar for installation of drinking water
ಬಳ್ಳಾರಿ 25: ನಗರದಲ್ಲಿ ಮಹಾನಗರ ಪಾಲಿಕೆಯ ವಾರ್ಡ್ ನಂ.34ರ ರಾಜೀವ್ ಗಾಂಧಿ ನಗರದಲ್ಲಿ ಕುಡಿಯುವ ನೀರು, ಒಳಚರಂಡಿ ಹಾಗೂ ಪೇವರ್ಸ್ ಅಳವಡಿಸುವ ಅಭಿವೃದ್ಧಿ ಕಾಮಗಾರಿಗೆ ಮಾಜಿ ಮಹಾಪೌರರು ಹಾಗೂ ಪಾಲಿಕೆ ಸದಸ್ಯರಾದ ರಾಜೇಶ್ವರಿ ಸುಬ್ಬರಾಯುಡು ಅವರು ಭೂಮಿ ಪೂಜೆ ನೆರವೇರಿಸಿದರು.ಈ ಪ್ರದೇಶದಲ್ಲಿ ಹಲವು ವರ್ಷಗಳಿಂದ ಸಮರ್ಕ ಕುಡಿಯುವ ನೀರಿನ ವ್ಯವಸ್ಥೆ ಹಾಗೂ ಒಳಚರಂಡಿ ಸೌಲಭ್ಯ ಇಲ್ಲದ ಕಾರಣ ಸಾರ್ವಜನಿಕರು ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದರು. ಮಳೆಯ ಸಮಯದಲ್ಲಿ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೂ ತೊಂದರೆ ಉಂಟಾಗುತ್ತಿತ್ತು.
ಇದರಿಂದ ಸ್ಥಳೀಯ ನಿವಾಸಿಗಳು ಮೂಲಸೌಕರ್ಯ ಅಭಿವೃದ್ಧಿಗೆ ಒತ್ತಾಯಿಸುತ್ತಿದ್ದರು.ಸಾರ್ವಜನಿಕರ ಬೇಡಿಕೆಯನ್ನು ಪರಿಗಣಿಸಿ 15ನೇ ಹಣಕಾಸು ಆಯೋಗದ ಅನುದಾನದಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ಕಾಮಗಾರಿಯಡಿ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಕೆ, ಒಳಚರಂಡಿ ನಿರ್ಮಾಣ ಹಾಗೂ ಪೇವರ್ಸ್ ಅಳವಡಿಕೆ ಕಾರ್ಯ ನಡೆಯಲಿದೆ. ಕಾಮಗಾರಿ ಪೂರ್ಣಗೊಂಡ ಬಳಿಕ ಪ್ರದೇಶದ ಜನರಿಗೆ ಮೂಲಭೂತ ಸೌಲಭ್ಯಗಳು ಸುಧಾರಿಸಲಿದ್ದು, ಸಂಚಾರ ಹಾಗೂ ಸ್ವಚ್ಛತೆ ಸಮಸ್ಯೆಗೂ ಪರಿಹಾರ ಸಿಗಲಿದೆ ಎಂದು ಸ್ಥಳೀಯರು ಅಭಿಪ್ರಾಯಪಟ್ಟರು. ಭೂಮಿ ಪೂಜೆ ಬಳಿಕ ಮಾತನಾಡಿದ ರಾಜೇಶ್ವರಿ ಸುಬ್ಬರಾಯುಡು ಅವರು, “ನಗರದ ಪ್ರತಿಯೊಂದು ವಾರ್ಡ್ನಲ್ಲೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ.
ಸಾರ್ವಜನಿಕರಿಗೆ ಅಗತ್ಯವಿರುವ ಸೌಲಭ್ಯಗಳನ್ನು ಹಂತ ಹಂತವಾಗಿ ಒದಗಿಸಲಾಗುತ್ತಿದೆ. ರಾಜೀವ್ ಗಾಂಧಿ ನಗರದ ನಿವಾಸಿಗಳ ಸಮಸ್ಯೆಯನ್ನು ಮನಗಂಡು ಈ ಕಾಮಗಾರಿ ಆರಂಭಿಸಲಾಗಿದೆ,” ಎಂದು ತಿಳಿಸಿದರು. ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿರುವುದಕ್ಕೆ ಸ್ಥಳೀಯ ನಿವಾಸಿಗಳು ಸಂತಸ ವ್ಯಕ್ತಪಡಿಸಿ, ರಾಜೇಶ್ವರಿ ಸುಬ್ಬರಾಯುಡು ಅವರ ಕಾರ್ಯವನ್ನು ಮೆಚ್ಚಿದರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಕಟ್ಟಾ ರಘು, ತುಕಾರಾಂ, ಷನ್ಮೂಘ, ಬಾಬು, ಕಟ್ಟಿ, ಜಂಬಣ್ಣ, ಲೋಕೇಶ್, ಯುವ ಮುಖಂಡ ಯೋಗಾನಂದ ರೆಡ್ಡಿ ಸೇರಿದಂತೆ ಹಲವರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 