ಬಿಜೆಪಿಗೆ ಬಿಗ್ ಶಾಕ್: ಕಾಂಗ್ರೆಸ್ ಸೇರಿದ ಮುನವಳ್ಳಿಯ ಹಿರಿಯ ನಾಯಕ ದುಂಡಪ್ಪ ಬುರ್ಜಿ
Big shock for BJP: Senior Munavalli leader Dundappa Burji joins Congress
ಲೋಕದರ್ಶನ ವರದಿ
ಸವದತ್ತಿ 16: ತಾಲೂಕಿನ ಮುನವಳ್ಳಿ ಭಾಗದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದ್ದು, ಹಿರಿಯ ರಾಜಕಾರಣಿ ಹಾಗೂ ಸಂಘಟನಾ ಚತುರ ದುಂಡಪ್ಪ ಬುರ್ಜಿ ಅವರು ಬಿಜೆಪಿ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರೆ್ಡಯಾಗಿದ್ದಾರೆ. ಸ್ಥಳೀಯ ಶಾಸಕ ವಿಶ್ವಾಸ ವೈದ್ಯ ಅವರ ನಿವಾಸದಲ್ಲಿ ನಡೆದ ಈ ಸೇರೆ್ಡ ಕಾರ್ಯಕ್ರಮವು ಅವರು ಮಾತನಾಡಿ ಮುನವಳ್ಳಿ ಭಾಗದ ರಾಜಕೀಯ ಸಮೀಕರಣಗಳಲ್ಲಿ ಮಹತ್ತರ ಬದಲಾವಣೆಗೆ ನಾಂದಿ ಹಾಡಿದೆ. ಅನುಭವಿ ನಾಯಕತ್ವ ದುಂಡಪ್ಪ ಬುರ್ಜಿ ಅವರು ಈ ಹಿಂದೆ ಮುನವಳ್ಳಿ ಪುರಸಭೆಯ ಮಾಜಿ ಉಪಾಧ್ಯಕ್ಷರಾಗಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ.
ಪಕ್ಷಕ್ಕೆ ಆನೆಬಲ ಇವರ ಸೇರೆ್ಡಯಿಂದ ಮುನವಳ್ಳಿ ಮತ್ತು ಸುತ್ತಮುತ್ತಲಿನ ಭಾಗಗಳಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಮತ್ತಷ್ಟು ಶಕ್ತಿ ಬಂದಂತಾಗಿದೆ.ಅಭಿವೃದ್ಧಿಯ ಮಂತ್ರ ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗಾಗಿ ಒಗ್ಗಟ್ಟಿನಿಂದ ಶ್ರಮಿಸುವ ಸಂಕಲ್ಪವನ್ನು ಈ ಸಂದರ್ಭದಲ್ಲಿ ಮಾಡಲಾಯಿತು.ದುಂಡಪ್ಪ ಬುರ್ಜಿ ಅವರ ಸುದೀರ್ಘ ರಾಜಕೀಯ ಅನುಭವ ಮತ್ತು ಜನಸೇವೆಯ ಮನೋಭಾವವು ನಮ್ಮ ಪಕ್ಷಕ್ಕೆ ದೊಡ್ಡ ಬಲ ತಂದಿದೆ. ಮುಂದಿನ ದಿನಗಳಲ್ಲಿ ತಾಲೂಕಿನ ಸಮಗ್ರ ಅಭಿವೃದ್ಧಿಗಾಗಿ ನಾವೆಲ್ಲರೂ ಕೈಜೋಡಿಸಿ ಕೆಲಸ ಮಾಡೋಣ ಎಂದರು. ಈ ವೇಳೆ ಚಂದ್ರು ಜಂಬ್ರಿ, ಮಲ್ಲು ಜಕಾತಿ, ಮಂಜುನಾಥ ಪಾಚಾಂಗಿ, ಸಿ.ಬಿ.ಬಾಳಿ, ಪ್ರವೀಣ್ ರಾಮಪ್ಪನವರ, ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.
ಹೆತ್ತ ವೃದ್ದ ತಾಯಿಯನ್ನೆ ನಿರ್ಜನ ಪ್ರದೇಶಕ್ಕೆ ರಾತ್ರಿ ಎಸೆದು ಹೋದ ಪಾಪಿ ಪುತ್ರ : ಅನ್ನ ನೀರು ಇಲ್ಲದೆ ಈಡಿ ರಾತ್ರಿ ಕಳೆದ ಹಿರಿಯ ಜೀವ
ಹಿಜಾಬ್ ವಿರುದ್ದ ಕೇಸರಿ ಶಾಲು ನೀಡಲು ಹೊರಟ ಶ್ರೀರಾಮಸೇನೆ ಕಾರ್ಯಕರ್ತರು ಪೊಲೀಸ ವಶಕ್ಕೆ
ನಿಡಸೋಸಿ ರಸ್ತೆ ಅಗಲಿಕರಣ: ಸ್ಮಶಾನದ ಸಮಾಧಿಗಳ ತೆರವು ಕಾರ್ಯ ಪ್ರಾರಂಭ, ನುಡಿದಂತೆ ನಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಮಹಾರಾಷ್ಟ್ರ ಸಚಿವನ ಟಿಪಿಯಲ್ಲಿ ಬೆಳಗಾವಿ ಎಂದು ನಮೂದು : ಎಮ್ ಇಎಸ್ ಆಕ್ಷೇಪ, ಕ್ರಮ ಖಂಡಿತ ಎಂದ ಸಾಮಂತ
ಮತ್ತೆ ಬೆಳಗಾವಿಯಲ್ಲಿ ಭಾಷಾ ಕ್ಯಾತೆ ಆರಂಭಿಸಿದ ಎಮ್ ಇಎಸ್ : 22ರಂದು ಡಾಂಬರ ಮೋರ್ಚಾ ಮಾಡತಾರಂತೆ
ಇಂದು ರಾತ್ರಿ ಬೆಳಗಾವಿಗೆ ಮಹಾರಾಷ್ಟ್ರ ಶಾಸಕ ಸಾಮಂತ ಆಗಮನ : 31ರಂದು ಎಮ್ ಇಎಸ್ ಮುಖಂಡರ ಜತೆ ಸಭೆ, ಚರ್ಚೆ 