ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಜಾಗೃತಿ ಬೈಕ್ ರ್ಯಾಲಿ
Bike Rally to Create Awareness About the Special Revision of the Voters' List
ಹೂವಿನಹಡಗಲಿ 7: ತಾಲೂಕು ಆಡಳಿತ, ತಾಪಂ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಎಸ್ಆರ್) ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಮಂಗಳವಾರ ಬೈಕ್ ರ್ಯಾಲಿ ಆಯೋಜಿಸಲಾಯಿತು.
ತಹಶೀಲ್ದಾರ್ ಕೆ.ಎಂ. ಗುರುಬಸವರಾಜ್ ಹಸಿರು ನಿಶಾನೆ ತೋರಿಸುವ ಮೂಲಕ ರ್ಯಾಲಿಗೆ ಚಾಲನೆ ನೀಡಿದರು. ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತ, ಲಾಲ್ ಬಹದ್ದೂರ್ ಶಾಸ್ತ್ರಿ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ರ್ಯಾಲಿ ಸಂಚರಿಸಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅರಿವು ಮೂಡಿಸಲಾಯಿತು.
ಮೂಲ ಸೌಲಭ್ಯಗಳಿಗೆ ಆಗ್ರಹ: ರ್ಯಾಲಿ ನಜೀರ್ ನಗರ ಹಾಗೂ ರಾಜೀವ್ ನಗರ ಪ್ರದೇಶಕ್ಕೆ ತಲುಪಿದ ವೇಳೆ ಸ್ಥಳೀಯ ನಿವಾಸಿಗಳು ಅಧಿಕಾರಿಗಳನ್ನು ತಡೆದು ತಮ್ಮ ಸಮಸ್ಯೆಗಳನ್ನು ಗಮನಕ್ಕೆ ತಂದರು. ರಸ್ತೆ, ಕುಡಿಯುವ ನೀರು, ಬೀದಿ ದೀಪ ಸೇರಿದಂತೆ ಮೂಲ ಸೌಲಭ್ಯಗಳನ್ನು ಮೊದಲು ಕಲ್ಪಿಸಬೇಕು. ಬಳಿಕ ಇಂತಹ ಜಾಗೃತಿ ಕಾರ್ಯಕ್ರಮಗಳಿಗೆ ಅವಕಾಶ ನೀಡುತ್ತೇವೆ ಎಂದು ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಕೆ.ಎಂ. ಗುರುಬಸವರಾಜ್, ತಾಪಂ ಇಒ ಪರಮೇಶಪ್ಪ, ಹೇಮದ್ರಿನಾಯ್ಕ, ವೀರಣ್ಣ ನಾಯ್ಕ, ಮುಖ್ಯಾಧಿಕಾರಿ ಜಿ. ಹನುಮಂತಪ್ಪ, ಬಿಇಒ ಡಬ್ಲ್ಯು. ಮಂಜುನಾಥ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 