ಹಾವೇರಿ

ಪಡಿತರ ವಿತರಣೆಗೆ ಬಯೋಮೆಟ್ರಿಕ್ ಕಡ್ಡಾಯ; ಅಕ್ರಮ ಸಾಗಾಟಕ್ಕೆ ಕಡಿವಾಣ: ಎಸ್‌.ಆರ್‌. ಪಾಟೀಲ

ಪಡಿತರ ವಿತರಣೆಗೆ ಬಯೋಮೆಟ್ರಿಕ್ ಕಡ್ಡಾಯ; ಅಕ್ರಮ ಸಾಗಾಟಕ್ಕೆ ಕಡಿವಾಣ: ಎಸ್‌.ಆರ್‌. ಪಾಟೀಲ

ಲೋಕದರ್ಶನ ವರದಿ 

ಹಾವೇರಿ, ಸೆ. 5: ಸರ್ಕಾರದ ಅನ್ನಭಾಗ್ಯ ಸೇರಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ಸಮರ​‍್ಕವಾಗಿ ತಲುಪುವಂತೆ ಅಧಿಕಾರಿಗಳು ಎಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಎಸ್‌.ಆರ್‌. ಪಾಟೀಲ ಸೂಚಿಸಿದರು.  

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.  

ಬಡ ಜನರು ಹಸಿವಿನಿಂದ ಮುಕ್ತರಾಗಬೇಕು ಎಂಬುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಆಹಾರ ಇಲಾಖೆಯ ಅಧಿಕಾರಿಗಳು, ಆಹಾರ ನೀರೀಕ್ಷಕರು ಹಾಗೂ ನ್ಯಾಯಬೆಲೆ ಅಂಗಡಿಗಳ ವಿತರಕರು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಸ್ಥಳೀಯವಾಗಿ ಎದುರಾಗುವ ಸಣ್ಣಪುಟ್ಟ ಸಮಸ್ಯೆಗಳನ್ನು ಗುರುತಿಸಿ ತ್ವರಿತವಾಗಿ ಪರಿಹರಿಸಬೇಕು ಎಂದು ಹೇಳಿದರು.  


ಸುದ್ದಿ ಓದಿ