ವಿಮಾನಕ್ಕೆ ಹಕ್ಕಿ ಢಿಕ್ಕಿ: ತುರ್ತು ಭೂಸ್ಪರ್ಶ
Bird hits plane: Emergency landing
ರಾಂಚಿ: 175 ಪ್ರಯಾಣಿಕರನ್ನು ಹೊತ್ತಿದ್ದ ಇಂಡಿಗೋ ವಿಮಾನವೊಂದಕ್ಕೆ ಹಕ್ಕಿ ಢಿಕ್ಕಿ ಹೊಡೆದ ಬಳಿಕ ರಾಂಚಿಯ ಬಿರ್ಸಾ ಮುಂಡಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ಸೋಮವಾರ ನಡೆದಿದೆ.
ಪಾಟ್ನಾದಿಂದ ರಾಂಚಿಗೆ ಬರುತ್ತಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಢಿಕ್ಕಿಯಾದಾಗ ಅದು 3,000 ರಿಂದ 4,000 ಅಡಿ ಎತ್ತರದಲ್ಲಿತ್ತು. ಪೈಲಟ್ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಏರ್ಬಸ್ 320 ವಿಮಾನಕ್ಕೆ ಹಾನಿಯಾಗಿದ್ದು, ಎಲ್ಲಾ ಪ್ರಯಾಣಿಕರು ಮತ್ತು ಸಿಬಂದಿ ಸುರಕ್ಷಿತರಾಗಿದ್ದಾರೆ ಎಂದು ಬಿರ್ಸಾ ಮುಂಡಾ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 