ಬಿರ್ಸಾ ಮುಂಡಾ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರರಾಗಿದ್ದರು : ಬಿ ಶ್ರೀರಾಮುಲು
ಬಳ್ಳಾರಿ. ನ. 15 : ಬುಡಕಟ್ಟು ಜನಾಂಗದ ಬಿರ್ಸಾಮುಂಡ ಒಬ್ಬ ಕ್ರಾಂತಿಕಾರಿ ಹೋರಾಟಗಾರರಾಗಿದ್ದರು ಇವರು ನಿರಂತರವಾಗಿ ಬ್ರಿಟಿಷರ ವಿರುದ್ಧ ಸ್ವತಂತ್ರಕ್ಕಾಗಿ ಹೋರಾಟಗಳನ್ನು ರೂಪಿಸಿದ್ದ ಸ್ವತಂತ್ರ ಸ್ವತಂತ್ರ ಹೋರಾಟಗಾರ ಆಗಿದ್ದರು ಎಂದು ಮಾಜಿ ಸಚಿವ ಬಿ ಶ್ರೀರಾಮುಲು ಹೇಳಿದರು.ಬಿರ್ಸಾ ಮುಂಡಾ ಅವರ 151ನೇ ಜಯಂತಿಯ ಅಂಗವಾಗಿ ಬಳ್ಳಾರಿಯಲ್ಲಿ ಎಸ್ಪಿ ಸರ್ಕಲ್ನಿಂದ ಬಿಜೆಪಿ ಕಚೇರಿವರೆಗೆ ನಡೆದ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದರು. ನಂತರ ಬಿಜೆಪಿ ಕಚೇರಿಯಲ್ಲಿ ಆಯೋಜಿಸಿದ್ದ ಜಯಂತೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರವ ನಮನ ಸಲ್ಲಿಸಿದೆನು.
ಇದೇ ಸಂದರ್ಭದಲ್ಲಿ ಮಹರ್ಷಿ ವಾಲ್ಮೀಕಿ ಅವರ ಪುತ್ತಳಿಗೆ ಮಾಲಾರೆ್ಣ ಮಾಡಿ ಗೌರವ ಸಮರ್ಿಸಿ, ಭಗವಾನ್ ಬಿರ್ಸಾ ಮುಂಡಾ ಅವರ ತ್ಯಾಗ, ಹೋರಾಟ ಮತ್ತು ದೇಶಪ್ರೇಮದ ಆದರ್ಶಗಳು ಸದಾ ನಮ್ಮೆಲ್ಲರಿಗೂ ಸ್ಫೂರ್ತಿಯಾಗಿರಲಿ ಎಂದು ಶ್ರೀರಾಮುಲು ತಿಳಿಸಿದರು.ಈ ಸಂದರ್ಭದಲ್ಲಿ ಎಸ್.ಟಿ. ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು, ವಿಧಾನಪರಿಷತ್ ಸದಸ್ಯ ವೈ.ಎಂ. ಸತೀಶ್, ಜಿಲ್ಲಾ ಅಧ್ಯಕ್ಷ ಅನಿಲ್ ಕುಮಾರ್ ಮೋಕಾ, ಮಾಜಿ ಸಂಸದ ಸಣ್ಣ ಪಕೀರ್ಪ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.