ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ರ ಜನ್ಮ ವರ್ಷಾಚರಣೆ
ಬಳ್ಳಾರಿ 27: ನಗರದಲ್ಲಿ ಧೀರ ಹುತಾತ್ಮ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ 116ನೇ ಜನ್ಮ ವರ್ಷಾಚರಣೆಯ ಸಂದರ್ಭದಲ್ಲಿ ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಸಮಿತಿಯಿಂದ ವಿವಿಧ ಶಾಲಾ ಕಾಲೇಜುಗಳಲ್ಲಿ ಕಾರ್ಯಕ್ರಮ ನಡೆಯಿತು.
ನಂತರ ಎಐಡಿಎಸ್ಓ ಬಳ್ಳಾರಿ ಜಿಲ್ಲಾ ಉಪಾಧ್ಯಕ್ಷ ಕೆ.ಈರಣ್ಣ, ಅವರು ಮಾತನಾಡಿ ಸಮಸಮಾಜದ ಕನಸನ್ನು ಕಾಣುತ್ತಾ, ಜಾತಿ - ಧರ್ಮಗಳ ಗಡಿಯನ್ನು ಮೀರಿ ಎಲ್ಲರೂ ಭಾರತವೆಂಬ ಒಂದೇ ಸೂರಿನಡಿಯಲ್ಲಿ ನೆಮ್ಮದಿಯಿಂದ ಬದುಕುವಂತಾಗಬೇಕು. ಹಾಗೂ ಬ್ರಿಟೀಷ್ ಸಾಮ್ರಾಜ್ಯಶಾಹಗಳ ವಿರುದ್ಧ ರಾಜಿರಹಿತ ಹೋರಾಟ ನಡೆಸಿದ ನಗುನಗುತ್ತಾ ಗಲ್ಗಂಬವನ್ನೇರಿದ ಭಗತ್ ಸಿಂಗ್ ಇಂದಿನ ವಿದ್ಯಾರ್ಥಿಗಳ ಹಾಗೂ ಯುವಕರ ಆದರ್ಶವಾಗಬೇಕಿದೆ. ಇಂದಿನ ಜನರ ಜ್ವಲ್ಪಂತ ಸಮಸ್ಯೆಗಳಾದ ಶಿಕ್ಷಣ ವ್ಯಾಪಾರೀಕರಣ, ನಿರುದ್ಯೋಗ, ಜಾತಿ ಹಾಗೂ ಕೋಮು ಸಮಸ್ಯೆಗಳ ವಿರುದ್ಧ ದ್ವನಿ ಎತ್ತಲು ಭಗತ್ ಸಿಂಗ್ ರವರ ವಿಚಾರಗಳು ಸ್ಫೂರ್ತಿಯಾಗಬೇಕಿದೆ ಎಂದು ಹೇಳಿದರು.ಎಐಡಿಎಸ್ಓ ಜಿಲ್ಲಾ ಸೆಕ್ರೆಟರಿಯೇಟ್ ಸದಸ್ಯರು ಎಂ.ಶಾಂತಿ, ಅವರು ಮಾತನಾಡಿ ಜಿಲ್ಲೆಯಲ್ಲಿ ಇಂದು ಶಿಕ್ಷಣ ಸಂಸ್ಥೆಗಳಲ್ಲಿ ಭಗತ್ ಸಿಂಗ್ ಜನ್ಮ ದಿನವನ್ನು ಸೂಕ್ತ ರೀತಿಯಲ್ಲಿ ಗಮನಿಸಲಾಯಿತು. ಭಗತ್ ಸಿಂಗ್ರ ಜೀವನ ಸಂಘರ್ಷ ಹಾಗೂ ವಿಚಾರಗಳನ್ನು ಸ್ಫೂರ್ತಿಯಾಗಿಸಿಕೊಂಡು ಅವರ ಕನಸಿನ ಸಮಾಜವಾದಿ ಭಾರತವನ್ನು ಕಟ್ಟುಲು ವಿದ್ಯಾರ್ಥಿಗಳು ಸಂಕಲ್ಪವನ್ನು ತೆಗೆದುಕೊಳ್ಳಬೇಕು ಎಂದರು.ಈ ಸಂದರ್ಭದಲ್ಲಿ ಎಐಡಿಎಸ್ಓ ಸಕ್ರೆಟರಿ ಸದಸ್ಯರಾದ ಉಮಾ ಶಾಲಾ-ಕಾಲೇಜಿನ ಉಪನ್ಯಾಸಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.