ಜನಪರ ಸೇವೆಗೈಯ್ಯದ ಪುರಸಭೆ ಮಾಜಿ ಅಧ್ಯಕ್ಷ ಭಟ್ಟ ಪ್ರಸಾದ್ ಜನ್ಮದಿನಾಚರಣೆ
Birthday celebration of Bhatta Prasad, ex-chairman of Municipal Corporation who did not serve the pe
ಲೋಕದರ್ಶನ ವರದಿ
ಕಂಪ್ಲಿ 26 : ಪುರಸಭೆ ಮಾಜಿ ಅಧ್ಯಕ್ಷ ಭಟ್ಟ ಪ್ರಸಾದ್ ಇವರು ತಮ್ಮ ಪುರಸಭೆ ಆಡಳಿತದ ಅವಧಿಯಲ್ಲಿ ಸಾಕಷ್ಟು ಜನಪರ ಸೇವೆಗೈಯ್ಯುವ ಮೂಲಕ ಸೌಲಭ್ಯಗಳನ್ನು ಕಲ್ಪಿಸಿದ್ದಾರೆ ಎಂದು ಯುವ ಮುಖಂಡ ಅಕ್ಕಿ ಜಿಲಾನ್ ಹೇಳಿದರು.ಪಟ್ಟಣದ ಗಂಗಾವತಿ ರಸ್ತೆಯ ಹಜರತ್ ಬಡೇಸಾಹೇಬ್ ದರ್ಗಾದಲ್ಲಿ ಪುರಸಭೆ ಮಾಜಿ ಅಧ್ಯಕ್ಷ ಭಟ್ಟ ಪ್ರಸಾದ್ ಅವರ ಜನ್ಮದಿನಾಚರಣೆ ಪ್ರಯುಕ್ತ ಕೇಕ್ ಕತ್ತರಿಸಿ, ಸಿಹಿ ತಿನ್ನಿಸುವ ಮೂಲಕ ಜನ್ಮದಿನ ಆಚರಿಸಿದ ನಂತರ ಮಾತನಾಡಿ, ಜೀವದುದ್ದಕ್ಕೂ ಜನಪರ ಕೆಲಸ ಮಾಡಿಕೊಂಡು ಬಂದಿದ್ದಾರೆ. ಪುರಸಭೆಯ ಅಲ್ಪ ಅವಧಿಯಲ್ಲಿ ಸಮಾಜಮುಖಿ ಕೆಲಸಗಳನ್ನು ಮಾಡಿದ್ದಾರೆ.
ಜನರ ಕಷ್ಟ ಕಾರ್ಪಣಯಗಳಿಗೆ ನಿರಂತರವಾಗಿ ಸ್ಪಂದಿಸುತ್ತಿದ್ದಾರೆ. ಆದ್ದರಿಂದ ಇಂತಹ ನಾಯಕರಿಗೆ ಎಲ್ಲಾ ರಂಗದಲ್ಲಿ ಅತ್ಯುತ್ತಮ ಸ್ಥಾನ ಲಭಿಸಬೇಕು. ಇವರಿಗೆ ಆ ದೇವರು ಆಯಸ್ಸು, ಆರೋಗ್ಯದ ಜೊತೆಗೆ ಇನ್ನಷ್ಟು ಸಮಾಜಸೇವೆಗೆ ಶಕ್ತಿ ನೀಡಲಿ ಎಂದು ಹಾರೈಯಿಸಿದರು.ನಂತರ ಪುರಸಭೆ ಮಾಜಿ ಅಧ್ಯಕ್ಷ ಭಟ್ಟ ಪ್ರಸಾದ್ ಅವರ ಸಮ್ಮುಖದಲ್ಲಿ ಕೇಕ್ ಕತ್ತರಿಸಿ, ಸಿಹಿ ಹಂಚುವ ಮೂಲಕ ವಿಜೃಂಭಣೆಯಿಂದ ಜನ್ಮದಿನ ಆಚರಿಸಿದರು.ಈ ಸಂದರ್ಭದಲ್ಲಿ ಪುರಸಭೆ ಮಾಜಿ ಸದಸ್ಯ ಲೊಡ್ಡು ಹೊನ್ನೂವರಲಿ, ಆಪ್ತ ಸಹಾಯಕ ಧನ್ರಾಜ್, ಮುಖಂಡರಾದ ಇಮ್ರಾನ್, ಮೈನು, ಬೆಳಗೋಡ್ ಜಾವೀದ್, ಬಿ.ಬಾಸಾ, ಬಿ.ಹಸನ್, ಬಾಲಕೃಷ್ನ ಆದಿಶೇಷಯ್ಯ , ಶ್ರೀಧರ್ ಇದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 