ಮುಂದಗೋಡ

ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ

ಡಾ.ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆ

ಲೋಕದರ್ಶನ ವರದಿ 

ಮುಂಡಗೋಡ:ಪಟ್ಟಣದ ಲೊಯೋಲ ವಿಕಾಸ ಕೇಂದ್ರದ ಸಭಾಭವನಲ್ಲಿ ಡಾ.ಮಹಾಂತ ಶಿವಯೋಗಿಗಳ ಜನ್ಮದಿನೋತ್ಸವದ ಅಂಗವಾಗಿ ಸೋಮವಾರ ಜರುಗಿದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಗ್ರೇಡ್‌-2 ತಹಶೀಲ್ದಾರ ಜಿ.ಬಿ.ಭಟ್ಟ ಉದ್ಘಾಟಿಸಿದರು.     

ಇದೆ ವೇಳೆ ಭಾರತ ಚುನಾವಣಾ ಆಯೋಗದ ವತಿಯಿಂದ ಕಂದಾಯ ಇಲಾಖೆಯ ಚುನಾವಣಾ ವಿಭಾಗದಿಂದ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಪದವಿ, ಡಿಪ್ಲೋಮಾ ಹಾಗೂ ಪಿಯುಸಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕಾರ್ಯಕ್ರಮದ ಬಗ್ಗೆ ವಿವರಿಸಿ ಕಾರ್ಯಕ್ರಮ ಯಶಸ್ವಿಗೊಳಿಸಲು ತಿಳಿಸಲಾಯಿತು. ಈ ಸಂದರ್ಭದಲ್ಲಿ ಪ.ಪಂ.ಮುಖ್ಯಾಧಿಕಾರಿ ಮಲ್ಲಯ್ಯ ಹಿರೇಮಠ, ಆರೋಗ್ಯ ಶಿಕ್ಷಣಾಧಿಕಾರಿ ಶ್ರಿಶೈಲ ಪಟ್ಟಣಶೆಟ್ಟಿ, ಪ್ರಭಾರ ಸಿಡಿಪಿಒ ದೀಪಾ ಬಂಗೇರ, ಶಿಕ್ಷಣ ಇಲಾಖೆ ಜಿ.ಎನ್‌.ನಾಯ್ಕ, ಗ್ರಾಮ ಲೆಕ್ಕಾಧಿಕಾರಿ ಗೋಣಿಬಸಪ್ಪ ಕೆ., ಉಪನ್ಯಾಸಕಿ ಅನುಪಮಾ ಉಪಸ್ಥಿತರಿದ್ದರು.ಶಿಕ್ಷಕ ಕೆ.ಕೆ.ಕರುವಿನಕೊಪ್ಪ ಕಾರ್ಯಕ್ರಮ ನಿರೂಪಿಸಿದರು. 


ಸುದ್ದಿ ಓದಿ