ರಾಷ್ಟ್ರೀಯ

ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಜನ್ಮದಿನ : ಪ್ರಧಾನಿ ಹಾರೈಕೆ

ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಜನ್ಮದಿನ : ಪ್ರಧಾನಿ ಹಾರೈಕೆ

ನವದೆಹಲಿ, ಡಿ 02: ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರ ಅರವತ್ತನೇ ಜನ್ಮದಿನದಂದು ಪ್ರಧಾನಿ ನರೇಂದ್ರ ಮೋದಿ ಆತ್ಮೀಯ ಶುಭಾಶಯ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ತಮ್ಮ ಸ್ಪೂರ್ತಿದಾಯಕ ನಾಯಕತ್ವದಲ್ಲಿ ಪಕ್ಷವು ನಿರಂತರವಾಗಿ ಹೊಸ ಎತ್ತರಕ್ಕೆ ಏರುತ್ತಿದೆ ಎಂದು ಹೇಳಿದ್ದಾರೆ.

"ಜೆ.ಪಿ. ನಡ್ಡಾ ಅವರು ಯಾವಾಗಲೂ ಆರೋಗ್ಯವಾಗಿರಬೇಕು ಮತ್ತು ದೀರ್ಘ ಜೀವನವನ್ನು ಹೊಂದಬೇಕೆಂದು ನಾನು ಬಯಸುತ್ತೇನೆ" ಎಂದು ಪ್ರಧಾನಿ ತಿಳಿಸಿದ್ದಾರೆ.

ಸುದ್ದಿ ಓದಿ