ಕೂಡಲಸಂಗಮ ಗ್ರಾಪಂ ಅಧಿಕಾರದ ಚುಕ್ಕಾಣಿ ಹಿಡಿದ ಬಿಜೆಪಿ
ಹುನಗುಂದ 04: ತಾಲೂಕಿನ ಕೂಡಲಸಂಗಮ ಗ್ರಾಮ ಪಂಚಾಯತಿಯಲ್ಲಿ ಕಾಂಗ್ರೆಸ್ ಕೈ ಸುಟ್ಟುಕೊಂಡರೇ ಬಿಜೆಪಿಯ ಕಮಲ ಅರಳಿತು. ಗ್ರಾ.ಪಂ ನೂತನ ಅಧ್ಯಕ್ಷರಾಗಿ ಯಲ್ಲವ್ವ ಭಜಂತ್ರಿ ಉಪಾಧ್ಯಕ್ಷರಾಗಿ ಮಲ್ಲವ್ವ ರಂಗಸಮುದ್ರ ಆಯ್ಕೆಯಾಗಿದ್ದಾರೆ. 15 ಸಂಖ್ಯೆ ಬಲಯುಳ್ಳ ಕೂಡಲಸಂಗಮ ಗ್ರಾ.ಪಂ ಅಧ್ಯಕ್ಷ ಸ್ಥಾನ ಎಸ್.ಸಿಗೆ ಮೀಸಲಾಗಿದ್ದರೇ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಶನಿವಾರ ನಿಗದಿಯಾದ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣೆ ನಡೆದು ಬಿಜೆಪಿ ಬೆಂಬಲಿತ ಯಲ್ಲವ್ವ ಭಜಂತ್ರಿ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಕೆ ಮಾಡಿದರೇ ಉಪಾಧ್ಯಕ್ಷ ಸ್ಥಾನಕ್ಕೆ ಮಲ್ಲವ್ವ ರಂಗಸಮುದ್ರ ನಾಮಪತ್ರ ಸಲ್ಲಿಸಿದರೆ, ಕಾಂಗ್ರೆಸ್ ಬೆಂಬಲಿತ ವೀರಭದ್ರಪ್ಪ ಚಲವಾದಿ ಅಧ್ಯಕ್ಷ ಸ್ಥಾನಕ್ಕೆ, ಉಪಾಧ್ಯಕ್ಷ ಸ್ಥಾನಕ್ಕೆ ಗಂಗವ್ವ ರಾಂಪೂರ ನಾಮಪತ್ರ ಸಲ್ಲಿಸಿದರು.
ನಂತರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಧ್ಯಕ್ಷ ಸ್ಥಾನ ಅಭ್ಯರ್ಥಿ ಯಲ್ಲವ್ವ ಭಜಂತ್ರಿ ಮತ್ತು ಮಲ್ಲವ್ವ ರಂಗಸಮುದ್ರ ತಲಾ 9 ಮತಗಳನ್ನು ಪಡೆದು 3 ಮತಗಳ ಅಂತರದಿಂದ ವಿಜಯಶಾಲಿಯಾದರು. ವಿಜಯೋತ್ಸವ; ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಆಯ್ಕೆಯಾಗುತ್ತಿದ್ದಂತೆ ಬಿಜೆಪಿಯ ಮುಖಂಡರು ಹಾಗೂ ಕಾರ್ಯಕರ್ತರು ಗುಲಾಲ ಎರಚಿ ಸಿಹಿ ಹಂಚಿ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವವನ್ನು ಆಚರಿಸಿದರು.