ರಂಭಾಪುರೀ ಜಗದ್ಗುರು ವೀರಗಂಗಾಧರ ಸ್ವತಂತ್ರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ರಕ್ತದಾನ ಶಿಬಿರ ಕಾರ್ಯಕ್ರಮ
ಲೋಕದರ್ಶನ ವರದಿ
ಶಿಗ್ಗಾವಿ ತಾಲೂಕಿನ ಹಿರೇಬೆಂಡಿಗೇರಿಯಲ್ಲಿ ರಂಭಾಪುರೀ ಜಗದ್ಗುರು ವೀರಗಂಗಾಧರ ಸ್ವತಂತ್ರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ರಕ್ತದಾನ ಶಿಬಿರ ಕಾರ್ಯಕ್ರಮದಲ್ಲಿ ರಕ್ತದಾನ ಮಾಡಿದ 15 ಗ್ರಾಮಸ್ಥರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ರಾಜೋತ್ಸವ ಪ್ರಶಸ್ತಿ ಪುರಸ್ಕೃತ ಜಯದೇವ ಅಗಡಿ, ರಮೇಶ ಸಾತಣ್ಣವರ, ಪ್ರೊ. ಎಸ್.ಬಿ.ಪೂಜಾರ ಸೇರಿದಂತೆಗ್ರಾಮ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಗ್ರಾಮಸ್ಥರು, ರೈತ ಭಾಂದವರು, ಮಹಿಳೆಯರು ಉಪಸ್ಥಿತರಿದ್ದರು.