ಸದಲಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ
ಲೋಕದರ್ಶನ ವರದಿ
ಮಾಂಜರಿ 27: ಸದಲಗಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಸದಲಗಾದಲ್ಲಿ ಋಂಅ, ಎನ್ ಎಸ್ ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ವತಿಯಿಂದ ಚಿಕ್ಕೋಡಿಯ ಆದರ್ಶ ಬ್ಲಡ್ ಕ್ಲಬ್ ಸಹಯೋಗದೊಂದಿಗೆ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.
ಶಿಬಿರದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುಜಾತಾ ಮಗದುಮ ಮಾತನಾಡಿ, ರಕ್ತದಾನವು ಅತ್ಯಂತ ಶ್ರೇಷ್ಠ ದನವಾಗಿದ್ದು, ಅಗತ್ಯವಿರುವವರಿಗೆ ರಕ್ತ ನೀಡುವ ಮೂಲಕ ಅಮೂಲ್ಯ ಜೀವವನ್ನು ಉಳಿಸಬಹುದು ಎಂದು ತಿಳಿಸಿದರು.
ಪ್ರಾಸ್ತಾವಿಕ ನುಡಿಗಳನ್ನಾಡಿದ ಪ್ರೊ. ಚಿದಾನಂದ ಶಿಂಗೆ ಅವರು, ಒಬ್ಬ ವ್ಯಕ್ತಿ ಮಾಡುವ ರಕ್ತದಾನದಿಂದ ನಾಲ್ಕು ಜೀವಗಳನ್ನು ಉಳಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು. ಎನ್‌ಎಸ್‌ಎಸ್ ಹಾಗೂ ರೆಡ್ ಕ್ರಾಸ್ ಘಟಕಗಳ ಸಂಚಾಲಕ ಅರುಣ್ ಕುರಬೆಟ್ ಸ್ವಾಗತಿಸಿದರು. ಅಭಿಲಾಷಾ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಪ್ರಾಧ್ಯಾಪಕ ಡಾ. ಎಸ್. ಎನ್. ಪಾಟೀಲ, ಡಾ. ಸೀಮಾ, ಡಾ. ಸಂಜೀವಿನಿ ಸೇರಿದಂತೆ ಕಾಲೇಜಿನ ಉಪನ್ಯಾಸಕರು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಶಿಬಿರದಲ್ಲಿ ಕಾಲೇಜಿನ ಹಲವಾರು ಉಪನ್ಯಾಸಕರು ಹಾಗೂ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾನವೀಯ ಸೇವೆಗೆ ಕೈಜೋಡಿಸಿದರು. ಆದರ್ಶ ಬ್ಲಡ್ ಕ್ಲಬ್‌ನ ವೈದ್ಯಕೀಯ ತಂಡ ಹಾಗೂ ಕಾಲೇಜಿನ ಎನ್ ಎಸ್ ಎಸ್ ಮತ್ತು ರೆಡ್ ಕ್ರಾಸ್ ಘಟಕಗಳ ಸಹಕಾರದಿಂದ ಶಿಬಿರ ಯಶಸ್ವಿಯಾಗಿ ನಡೆಯಿತು.