ಗಣೇಶೋತ್ಸವ ಮೂಲಕ ರಕ್ತದಾನ ಶಿಬಿರ ಆದರಣೀಯ: ಸಿ.ಆರ್. ಮುಂಡರಗಿ
Blood donation camp organized during Ganeshotsava is praiseworthy: C.R. Mundaragi
ಮುಂಡರಗಿ 17: ರಕ್ತದಾನ ಮನುಷ್ಯನ ದೇಹ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರಿ, ಹೃದಯಾಘಾತ ಹಾಗೂ ಕೊಲೆಸ್ಟ್ರಾಲ್ ಕಡಿಮೆ ಗೊಳಿಸಲು ಪ್ರಮುಖ ಆರೋಗ್ಯ ವಿಧಾನವಾಗಿದೆ. ಇಂತಹ ಮಹತ್ತರ ಕಾರ್ಯವನ್ನು ಗಣೇಶೋತ್ಸವದ ಅಂಗವಾಗಿ ಹಮ್ಮಿಕೊಂಡ ಮುಂಡರಗಿ ತಾಲೂಕ ಪಂಚಾಯತ ನಡೆ ಆದರಣೀಯ ಎಂದು ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಸಿ.ಆರ್.ಮುಂಡರಗಿ ಹೇಳಿದರು.ಗಣೇಶೋತ್ಸವ 2026ರ ನಿಮಿತ್ತ ಮುಂಡರಗಿ ತಾಲೂಕು ಪಂಚಾಯತ ಆವರಣದಲ್ಲಿ ತಾಲೂಕು ಆಸ್ಪತ್ರೆ ಮುಂಡರಗಿ ಹಾಗೂಬಸವೇಶ್ವರ ರಕ್ತ ಕೇಂದ್ರ, ಗದಗ ಸಹಯೋಗದೊಂದಿಗೆ ಗುರುವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯವಂತ ಯುವಕರು ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು. ಇದರಿಂದ ಆರೋಗ್ಯದ ಮೇಲೆ ಯಾವುದೇ ತೊಂದರೆ ಆಗುವುದಿಲ್ಲ. ಜೊತೆಗೆ ಹೊಸಚೈತನ್ಯ ಮೂಡಿಸುತ್ತದೆ. ಈ ಬಗ್ಗೆ ಪ್ರತಿ ಯೊಬ್ಬರು ಅರಿತುಕೊಂಡು ಸ್ವಯಂ ಪ್ರೇರಿತರಾಗಿ ರಕ್ತದಾನಕ್ಕೆ ಮುಂದಾಗಬೇಕು ಎಂದರು.ತಾಲೂಕಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಡಿ.ಡಿ.ಮೋರನಾಳ ಅವರು ಮಾತನಾಡಿ, ರಕ್ತದಾನದಿಂದ ಸಂಕಷ್ಟದಲ್ಲಿರುವ ವ್ಯಕ್ತಿಗಳ ಜೀವ ಉಳಿಸಬಹುದಾಗಿದೆ. ಇದನ್ನರಿತು ಪ್ರತಿಯೊಬ್ಬರೂ ರಕ್ತದಾನ ಪ್ರಕ್ರಿಯೆಯಲ್ಲಿ ತೊಡಗಬೇಕು. ತುರ್ತು ಸಂದರ್ಭದಲ್ಲಿರುವ ವ್ಯಕ್ತಿಗಳಿಗೆ ರಕ್ತದಾನ ಮಾಡಿದರೆ ಒಂದು ಪ್ರಾಣ ಉಳಿಸಿದ ಪುಣ್ಯ ಲಭಿಸುತ್ತದೆ.
ಹೀಗಾಗಿ ರಕ್ತದಾನ ಅತ್ಯಂತ ಶ್ರೇಷ್ಟವಾಗಿದೆ ಎಂದರು.ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ ಬೆಣ್ಣೆ ಮಾತನಾಡಿ, ತಾಲೂಕು ಪಂಚಾಯತ ಮುಂಡರಗಿ ವತಿಯಿಂದ ಪ್ರತಿವರ್ಷ ಗಣೇಶೋತ್ಸವದಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರವನ್ನು ಆಯೋಜಿಸುವ ಮೂಲಕ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಪ್ರತಿ ವರ್ಷವು ಕಾರ್ಯಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲ ಅಪಘಾತ ಸಂದರ್ಭಗಳಲ್ಲಿ ರಕ್ತ ಸಿಗದೆ ಮೃತಪಡುತ್ತಿರುವ ಉದಾಹರಣೆಗಳು ನಮ್ಮ ಕಣ್ಮುಂದೆ ಕಾಣಸಿಗುತ್ತಿದ್ದು ಇದನ್ನರಿತು ಶಿಬಿರಗಳಲ್ಲಿ ಪಾಲ್ಗೊಂಡು ರಕ್ತದಾನ ಮಾಡುವುದರ ಮೂಲಕ ಇತರರ ಜೀವ ಉಳಿಸಲು ನೆರವಾಗಬೇಕು ಎಂದು ಹೇಳಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 